ಕರ್ನಾಟಕಪ್ರಮುಖ ಸುದ್ದಿ

ಸಮನ್ವಯ ಸಮಿತಿ ಅಧ್ಯಕ್ಷ ಸ್ಥಾನದಿಂದ ಸಿದ್ದರಾಮಯ್ಯಗೆ ಕೊಕ್‌?

ಬೆಂಗಳೂರು (ಮೇ 29): ದೋಸ್ತಿ ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವ ಮಾತುಗಳು ಕೂಡ ಕೇಳಿ ಬರುತ್ತವೆ. ಈ ಸಾಲಿಗೆ ಸಿದ್ದರಾಮಯ್ಯಯವರು ಹೊಂದಿರುವ ಎರಡು ಸ್ಥಾನಗಳಲ್ಲಿ ಒಂದು ಸ್ಥಾನವನ್ನು ವಾಪಸ್ಸು ಪಡೆದುಕೊಳ್ಳುವುದಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ಮುಂದಾಗಿದೆ ಎನ್ನಲಾಗಿದೆ.

ಸಿದ್ದರಾಮಯ್ಯ ಅವರು ಸದ್ಯ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸ್ಥಾನವನ್ನು ಹೊಂದಿದ್ದು, ಈ ಪೈಕಿ ಸಮನ್ವಯ ಸಮಿತಿ ಅಧ್ಯಕ್ಷದಿಂದ ಅವರಿಗೆ ಕೊಕ್ ನೀಡಿ ಆ ಸ್ಥಾನಕ್ಕೆ ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೀಡಲಾಗುವುದು ಎನ್ನಲಾಗುತ್ತಿದೆ.

ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ ಹೀನಾಯ ಫಲಿತಾಂಶವನ್ನು ಪಡೆದುಕೊಂಡಿದ್ದು ಕೇವಲ ಒಂದೇ ಒಂದು ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

ಮಲ್ಲಿಕಾರ್ಜುನ ಖರ್ಗೆ ಅವರು ಜೆಡಿಎಸ್ ನಾಯಕರ ಜೊತೆಗೆ ಉತ್ತಮ ಸಂಬಂಧಹೊಂದಿರುವುದರಿಂದ ಈ ನಿರ್ಧಾರವನ್ನು ಕಾಂಗ್ರೆಸ್‌ ಹೈಕಮಾಂಡ್‌ ತೆಗೆದುಕೊಳ್ಳಲಿದೆ ಎನ್ನಲಾಗಿದೆ. ಹೀಗಾಗಿ ಕಾಂಗ್ರೆಸ್‍ನಲ್ಲಿ ಹಲವು ಮಂದಿಯ ಸ್ಥಾನಗಳು ಬದಲಾಗುವ ನಿರೀಕ್ಷೆಗಳು ಕೂಡ ಹೆಚ್ಚಿವೆ. (ಎನ್.ಬಿ)

Leave a Reply

comments

Related Articles

error: