ಕರ್ನಾಟಕ

ಜಗನ್ಮೋಹನ್ ರೆಡ್ಡಿ ಪ್ರಮಾಣವಚನಕ್ಕೆ ಚಂದ್ರಬಾಬು ನಾಯ್ಡು ಗೈರು?

ಅಮರಾವತಿ (ಮೇ 29): ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಮೇ 30 ರಂದು ಜಗನ್ಮೋಹನ್ ರೆಡ್ಡಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಈ ಕಾರ್ಯಕ್ರಮಕ್ಕೆ ಟಿಡಿಪಿ ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಭಾಗವಹಿಸುವುದಿಲ್ಲ ಎಂದು ಟಿಡಿಪಿ ಮೂಲಗಳು ತಿಳಿಸಿವೆ.

ಆದರೆ ಪ್ರಮಾಣವಚನ ಕಾರ್ಯಕ್ರಮಕ್ಕೂ ಮುನ್ನ ಅಮರಾವತಿಯ ಜಗನ್ ನಿವಾಸಕ್ಕೆ ಟಿಡಿಪಿ ನಿಯೋಗವೊಂದು ಭೇಟಿ ನೀಡಲಿದ್ದು, ಅವರಿಗೆ ಶುಭ ಕೋರಲಿದೆ ಎಂದು ಮೂಲಗಳು ತಿಳಿಸಿವೆ.

ಜಗನ್ ರೆಡ್ಡಿ ಅವರು ಚಂದ್ರಬಾಬು ನಾಯ್ಡು ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರನ್ನೂ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ. ಆದರೆ ನಾಯ್ಡು ಅವರು ಕಾರ್ಯಕ್ರಮಕ್ಕೆ ಗೈರಾಗಲಿದ್ದು, ಕೆಸಿಆರ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಆಂಧ್ರಪ್ರದೇಶದ ಒಟ್ಟು 175 ವಿಧಾನಸಭಾ ಕ್ಷೇತ್ರಗಳಲ್ಲಿ 152 ವೈಎಸ್ ಆರ್ ಕಾಂಗ್ರೆಸ್, 22 ಟಿಡಿಪಿ ಮತ್ತು 1 ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಜಯಗಳಿಸಿದ್ದರು.

ಲೋಕಸಭೆ ಚುನಾವಣೆಯಲ್ಲಿ 25 ಕ್ಷೇತ್ರಗಳಲ್ಲಿ 22 ವೈಎಸ್‍ಆರ್ ಕಾಂಗ್ರೆಸ್ ಮತ್ತು ಕೇವಲ 2 ಕ್ಷೇತ್ರಗಳಲ್ಲಿ ಟಿಡಿಪಿ ಜಯಗಳಿಸಿತ್ತು. ಇಲ್ಲಿ ಏಪ್ರಿಲ್ 11 ರಂದು ಒಂದೇ ಹಂತದಲ್ಲಿ ಮತದಾನ ನಡೆದಿದ್ದು, ಮೇ 23 ರಂದು ಫಲಿತಾಂಶ ಹೊರಬಿದ್ದಿತ್ತು. (ಎನ್.ಬಿ)

Leave a Reply

comments

Related Articles

error: