ಮೈಸೂರು

ಕಾರಿಗೆ ಬೆಂಕಿ : ಸುಟ್ಟು ಭಸ್ಮ

ಮೈಸೂರು,ಮೇ.30:- ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಕಾರು ಸಂಪೂರ್ಣ ಭಸ್ಮಗೊಂಡ ಘಟನೆ ವಿಜಯನಗರ ನಾಲ್ಕನೇ ಹಂತದಲ್ಲಿ ನಡೆದಿದೆ.

ಮಂಗಳವಾರ ತಡರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ಗುಡುಗು ಸಿಡಿಲು ಬಂದಾಗ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿತ್ತು. ಕೂಡಲೇ ಹೆಬ್ಬಾಳು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಲಾಗಿದ್ದು, ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಬೆಂಕಿಯನ್ನು ಆರಿಸಿದ್ದಾರೆ. ಬೆಂಕಿಗೆ ಶಾರ್ಟ್ ಸರ್ಕ್ಯೂಟ್ ಕಾರಣವಾಗಿರಬಹುದೆಂದು ಪೊಲೀಸರು ತಿಳಿಸಿದ್ದು, ಕಾರು ಸುಟ್ಟು ಭಸ್ಮವಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: