ಮೈಸೂರು

ಕಾಂಗ್ರೆಸ್ ಸೇರಲಿರುವ ಕಳಲೆ ಕೇಶವಮೂರ್ತಿ

ನಂಜನಗೂಡಿನ ಜೆಡಿಎಸ್ ಮುಖಂಡ ಕಳಲೆ ಕೇಶವ ಮೂರ್ತಿ ಕಾಂಗ್ರೆಸ್ ಸೇರುವ ಕುರಿತು ಅಧಿಕೃತವಾಗಿ ಘೋಷಿಸಿದ್ದಾರೆ.
ಆಪ್ತರು ಹಾಗೂ ಬೆಂಬಲಿಗರ ಸಭೆ ಕರೆದಿದ್ದ ಕೇಶವಮೂರ್ತಿ ಎಲ್ಲರ ಅಭಿಪ್ರಾಯ ಪಡೆದು ಕಾಂಗ್ರೆಸ್ ಸೇರಲು ನಿರ್ಧಾರ ಮಾಡಿದರು. ಜೆಡಿಎಸ್‌ನಿಂದ ಹೊರ ಬಂದು ಕಾಂಗ್ರೆಸ್ ಸೇರುವುದಾಗಿ ಸಭೆಯಲ್ಲಿ ಘೋಷಿಸಿದರು. ಅಭಿಮಾನಿಗಳ ಒತ್ತಾಯದ ಮೇರೆಗೆ  ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದರು. ಇನ್ನು ಕೆಲವೇ ದಿನದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಲಿದ್ದೇನೆ ಎಂದು ತಿಳಿಸಿದರು.
ಕೇಶವಮೂರ್ತಿಯೇ ನಂಜನಗೂಡಿನ ಉಪಚುನಾವಣೆಯಲ್ಲಿ ಬಹುತೇಕ ಕಾಂಗ್ರೆಸ್ ಅಭ್ಯರ್ಥಿ ಆಗುವ ಸಾಧ್ಯತೆ ಇದ್ದು, ಸಿಎಂ ಸಿದ್ದರಾಮಯ್ಯನವರ ಸಮ್ಮುಖದಲ್ಲೆ ಕಾಂಗ್ರೆಸ್ ಸೇರಲಿದ್ದೇನೆ ಎಂದಿದ್ದಾರೆ.

ನಂಜನಗೂಡಿನಲ್ಲಿ ಉಪಚುನಾವಣೆ ಎದುರಾಗುವ ಹಿನ್ನೆಲೆಯಲ್ಲಿ  ಸಭೆ ನಡೆಸಿದರು.

Leave a Reply

comments

Related Articles

error: