ಮೈಸೂರು

ಅಭಿವೃದ್ಧಿಗಾಗಿ ಬಿಡುಗಡೆಗೊಂಡ ಹಣದಲ್ಲಿ ಅವ್ಯವಹಾರ ನಡೆದಿದೆ : ಕ್ರಮ ಕೈಗೊಳ್ಳಲು ಒತ್ತಾಯಿಸಿ ಪ್ರತಿಭಟನೆ

ಮೈಸೂರು ಮಹಾನಗರಪಾಲಿಕೆ ವ್ಯಾಪ್ತಿಯ 57ನೇ ವಾರ್ಡಿನ ಕಾವೇರಿ ಮುಖ್ಯ ರಸ್ತೆಯ ಅಭಿವೃದ್ಧಿಗಾಗಿ ಬಿಡುಗಡೆಗೊಂಡ ಹಣ ಅಭಿವೃದ್ಧಿಗಾಗಿ ಉಪಯೋಗವಾಗದೇ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ 57ನೇ ವಾರ್ಡಿನ ನಿವಾಸಿಗಳು ಪ್ರತಿಭಟನೆ ನಡೆಸಿದರು.

ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ಕಾವೇರಿ ಮುಖ್ಯರಸ್ತೆಯ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಅನುದಾನದಿಂದ 1.25ಲಕ್ಷ ಹಾಗೂ ನಗರಪಾಲಿಕೆಯಿಂದ 1ಕೋಟಿ ಬಿಡುಗಡೆಗೊಂಡಂತಹ ಹಣವನ್ನು ಅಭಿವೃದ್ಧಿ ಹೆಸರಿನಲ್ಲಿ ಅವ್ಯವಹಾರ ನಡೆಸಲಾಗಿದೆ ಎಂದು ಆರೋಪಿಸಿದರು. ಈ ಕುರಿತು ಹೆಚ್ಚಿನ ಮಟ್ಟದ ತನಿಖೆಯಾಗಬೇಕು. ಭ್ರಷ್ಟ ತಂಡಕ್ಕೆ ಕೂಡಲೇ ತಕ್ಷ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ 57ನೇ ವಾರ್ಡ್ ನಿವಾಸಿಗಳು ಪಾಲ್ಗೊಂಡಿದ್ದರು.

Leave a Reply

comments

Related Articles

error: