ಮೈಸೂರು

ಕುಲುಮೆ ಹೊಸೂರು ಗ್ರಾಮದಲ್ಲಿ ಸಚಿವ ಸಾ.ರಾ.ಮಹೇಶ್ ರಿಂದ ಅಹವಾಲು ಸ್ವೀಕಾರ

ಮೈಸೂರು,ಜೂ.1:- ಪ್ರವಾಸೋದ್ಯಮ ಮತ್ತು ರೇಷ್ಮೆ ಸಚಿವರಾದ ಸಾ. ರಾ. ಮಹೇಶ್ ಅವರು ನಿನ್ನೆ ರಾತ್ರಿ ಶೀಗವಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಲುಮೆ ಹೊಸೂರು ಗ್ರಾಮದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

ಇದಾದ ನಂತರ ಇದೇ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆಟ್ಟಹಳ್ಳಿಯಲ್ಲಿ ಗ್ರಾಮ ವಾಸ್ತವ್ಯ ಮಾಡಿದರು. ಇಂದು ಸಚಿವರು ಶೀಗವಾಳು ಗ್ರಾಮ ಪಂಚಾಯತ್  ವ್ಯಾಪ್ತಿಯ ಗ್ರಾಮಗಳ ಜನಸ್ಪಂದನ ಕಾರ್ಯಕ್ರಮ ಮಾಡುವರು.

ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಪೊಲೀಸ್ ಅಧೀಕ್ಷಕರಾದ ಅಮಿತ್ ಸಿಂಗ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶಿವಕುಮಾರಸ್ವಾಮಿ, ಹುಣಸೂರು ಉಪವಿಭಾಗಾಧಿಕಾರಿ ಚಂದ್ರಶೇಖರಯ್ಯ, ತಹಶೀಲ್ದಾರ್ ಮಂಜುಳ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: