ಮೈಸೂರು

ನಾಯಕ ಜನಾಂಗದ ಸಮಸ್ಯೆಗಳನ್ನು ಪರಿಹರಿಸಲು ಒತ್ತಾಯ : ಪ್ರತಿಭಟನೆ

ಕರ್ನಾಟಕ ರಾಜ್ಯದಲ್ಲಿ ನಾಯಕ ಜನಾಂಗ ನಾಲ್ಕನೇ ಸ್ಥಾನದಲ್ಲಿದ್ದು, ಪರಿಶಿಷ್ಟ ಪಂಗಡಕ್ಕೆ ಸೇರಿದ ಸುಮಾರು 69ಲಕ್ಷ ಜನಸಂಖ್ಯೆಯುಳ್ಳ ಸಮುದಾಯವಾಗಿದ್ದು, ಈ ಸಮುದಾಯ ಆರ್ಥಿಕವಾಗಿ, ಸಾಮಾಜಿಕವಾಗಿ ರಾಜಕೀಯವಾಗಿ, ಶೈಕ್ಷಣಿಕವಾಗಿ ಹಿಂದುಳಿದಿದ್ದು, ಹಲವು ಸಮಸ್ಯೆಗಳಿಗೆ ಸಿಲುಕಿದೆ. ಸಮಸ್ಯೆಗಳನ್ನು ಪರಿಹರಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಯಿತು.

ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತಾಡಿ 2017ರ ಬಜೆಟ್ ನಲ್ಲಿ ಪರಿಶಿಷ್ಟ ಪಂಗಡಕ್ಕೆ 7.7% ಮೀಸಲಾತಿ ನಿಗದಿಪಡಿಸಬೇಕು. ಬ್ಯಾಕ್ ಲಾಗ್ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡಬೇಕು. ಕರ್ನಾಟಕ ವಾಲ್ಮೀಕಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮದಿಂದ ನೇರ ಸಾಲ ಯೋಜನೆಯನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ತಾಲೂಕುಗಳಲ್ಲಿ ಪರಿಶಿಷ್ಟ ವರ್ಗದ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿನಿಲಯಗಳನ್ನು ಸ್ಥಾಪಿಸಬೇಕು ಎಂಬಿತ್ಯಾದಿ ಹಕ್ಕೊತ್ತಾಯಗಳನ್ನು ಮುಂದಿರಿಸಿದರು.

ಪ್ರತಿಭಟನೆಯಲ್ಲಿ ರಾಜ್ಯಾಧ್ಯಕ್ಷ ದ್ಯಾಪ್ಪ ನಾಯಕ, ಜಿಲ್ಲಾಧ್ಯಕ್ಷ ಶ್ರೀಧರ್ ಚಾಮುಂಡಿಬೆಟ್ಟ, ಪ್ರಭಾಕರ ಹುಣಸೂರು, ಜವರಪ್ಪ ರಮ್ಮನಹಳ್ಳಿ, ಸುರೇಶ್ ಕುಮಾರಬೀಡು ಸೇರಿದಂತೆ ನೂರಾರು ಮಂದಿ ಪಾಲ್ಗೊಂಡಿದ್ದರು.

Leave a Reply

comments

Related Articles

error: