ಪ್ರಮುಖ ಸುದ್ದಿ

ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಹೆಚ್.ಪಿ.ಸ್ವರೂಪ್ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಿಢೀರ್ ಭೇಟಿ

ರಾಜ್ಯ(ಹಾಸನ)ಜೂ.1:- ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ  ಹೆಚ್.ಪಿ.ಸ್ವರೂಪ್ ಅವರು ಹಲವು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ  ಹೆಚ್.ಪಿ.ಸ್ವರೂಪ್   ಸಾಲಗಾಮೆ ಹೋಬಳಿಯ ಪ್ರಾಥಮಿಕ ಆರೋಗ್ಯ ಕೇಂದ್ರ, ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಮತ್ತು ನಿಟ್ಟೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ, ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಗಳಿಗೆ ದಿಢೀರ್ ಭೇಟಿ ನೀಡಿದರು.

ಆಸ್ಪತ್ರೆ ಅಧಿಕಾರಿಗಳ ಜೊತೆ ಆಸ್ಪತ್ರೆಯ ಕುಂದು ಕೊರತೆಗಳ ಬಗ್ಗೆ ಚರ್ಚೆ ನಡೆಸಿದರು. ಸ್ಥಳದಲ್ಲಿ ತಾಲೂಕು ಆರೋಗ್ಯಾಧಿಕಾರಿಗಳು, ಆಸ್ಪತ್ರೆ ಮೇಲಾಧಿಕಾರಿಗಳು  ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: