ಪ್ರಮುಖ ಸುದ್ದಿ

ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ಕರೆಯುವಂತೆ ಆಗ್ರಹಿಸಿ ಪ್ರತಿಭಟನೆ

ರಾಜ್ಯ(ಚಾಮರಾಜನಗರ)ಜೂ.1:- ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ಕರೆಯುವಂತೆ ಆಗ್ರಹಿಸಿ ಹಾಗೂ ಗುಂಡ್ಲುಪೇಟೆ ತಾಲೂಕಿನ ವಡ್ಡಗೆರೆ ಕೆರೆಗೆ ನೀರು ತುಂಬಿಸಲು ವಿಳಂಬ ಮಾಡುತ್ತಿರುವ ಜಿಲ್ಲಾಡಳಿತದ ಕ್ರಮವನ್ನು  ಖಂಡಿಸಿ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು  ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಶ್ರೀ ಭವನೇಶ್ವರಿ ವೃತ್ತದಲ್ಲಿ ಜಮಾಯಿಸಿದ ರೈತ ಸಂಘದ ಕಾರ್ಯಕರ್ತರು ಕೆಲಕಾಲ ರಾಷ್ಟ್ರೀಯ ಹೆದ್ದಾರಿ -209ರ ಸಂಚಾರ ತಡೆ ನಡೆಸಿ, ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಜಿಲ್ಲಾಡಳಿತದ ವಿರುದ್ದ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸಿ.ಪುಟ್ಟರಂಗಶೆಟ್ಟಿ ಅವರು ಜಿಲ್ಲಾ ಉಸ್ತುವಾರಿ ಸಚಿವರಾದ ಸಮಯದಿಂದ ಇಲ್ಲಿಯವರೆಗೂ ಜಿಲ್ಲಾಮಟ್ಟದ ಅಧಿಕಾರಿಗಳ ಯಾವುದೇ ಸಭೆ ಕರೆದು ಸಮಸ್ಯೆಗಳ ಬಗ್ಗೆ ಚರ್ಚಿಸಿಲ್ಲ. ಹೀಗಾಗಿ ಜಿಲ್ಲಾದ್ಯಂತ ವಿವಿಧ ಸಮಸ್ಯೆಗಳು ತಾಂಡವವಾಡುತ್ತಿವೆ. ಅಲ್ಲದೆ ಗುಂಡ್ಲುಪೇಟೆ ತಾಲೂಕಿನ ವಡ್ಡಗೆರೆ ಕೆರೆಗೆ ಕಬಿನಿ ನದಿಯಿಂದ ನೀರುತುಂಬಿ ಸುವಲ್ಲಿ ಜಿಲ್ಲಾಡಳಿತ ವಿಳಂಬ ನೀತಿ ಅನುಸರಿಸುತ್ತಿದೆ. ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ವಿಳಂಬ ನೀತಿಯನ್ನು ಬಿಟ್ಟು ಕಾರ್ಯೋ ನ್ಮುಖರಾಗುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: