ದೇಶ

ರಾಹುಲ್ ಗಾಂಧಿ ಮನವಿ ಪತ್ರಕ್ಕೆ ಪಿಣರಾಯಿ ವಿಜಯನ್ ಸ್ಪಂದನೆ

ನವದೆಹಲಿ,ಜೂ.1-ವಯನಾಡ್ ನ ರೈತ ಆತ್ಮಹತ್ಯೆ ಮಾಡಿಕೊಂಡ ವಿಚಾರವಾಗಿ ಕಾಂಗ್ರೆಸ್ ಅಧ್ಯಕ್ಷ ಹಾಗೂ ಸಂಸದ ರಾಹುಲ್ ಗಾಂಧಿ ಬರೆದ ಮನವಿ ಪತ್ರಕ್ಕೆ ಕೇರಳ ಸಿಎಂ ಪಿಣರಾಯಿ ವಿಜಯನ್ ಸ್ಪಂದಿಸಿದ್ದಾರೆ.

ರೈತನ ಆತ್ಮಹತ್ಯೆಗೆ ಕಾರಣವಾದ ಅಂಶದ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದ್ದಾರೆ. ವಯನಾಡ್‌ನ ನೂತನ ಸಂಸದ ರಾಹುಲ್ ತನ್ನ ಕ್ಷೇತ್ರದ ರೈತನ ಆತ್ಮಹತ್ಯೆ ಘಟನೆಯ ಬಗ್ಗೆ ತನಿಖೆ ನಡೆಸಿ, ರೈತರ ಸಮಸ್ಯೆಗೆ ದೀರ್ಘಕಾಲೀನ ಪರಿಹಾರ ಒದಗಿಸುವಂತೆ ಕೇಳಿಕೊಂಡ ಕೆಲವೇ ಗಂಟೆಗಳಲ್ಲಿ ವಿಜಯನ್ ಪ್ರತಿಕ್ರಿಯೆ ನೀಡಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರಿಗೆ ಮೇ 31 ರಂದು ಪತ್ರ ಬರೆದಿರುವ ಕೇರಳ ಮುಖ್ಯಮಂತ್ರಿ ವಿಜಯನ್, ರೈತ ವಿ.ಡಿ.ದಿನೇಶ್ ಕುಮಾರ್ ಆತ್ಮಹತ್ಯೆಗೆ ಕಾರಣವಾದ ಅಂಶದ ಬಗ್ಗೆ ವಿವರವಾದ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ವಯನಾಡ್‌ನ ಜಿಲ್ಲಾಧಿಕಾರಿಗೆ ನಾನು ತಿಳಿಸಿದ್ದೇನೆ. ಆರ್ಥಿಕ ನೆರವು ಸೇರಿದಂತೆ ಎಲ್ಲ ಕ್ರಮವನ್ನು ತಕ್ಷಣವೇ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.

ರೈತರ ಸಾಲದ ಸಮಸ್ಯೆಯನ್ನು ಕೇಂದ್ರ ಸರ್ಕಾರದಿಂದ ಮಾತ್ರ ಪರಿಹರಿಸಲು ಸಾಧ್ಯ. ತಾವು ಸಂಸತ್ತಿನಲ್ಲಿ ಈ ವಿಚಾರವನ್ನು ಎತ್ತಬೇಕೆಂದು ವಿಜಯನ್ ಆಗ್ರಹಿಸಿದ್ದಾರೆ. (ಎಂ.ಎನ್)

 

Leave a Reply

comments

Related Articles

error: