ಪ್ರಮುಖ ಸುದ್ದಿಮೈಸೂರು

ಜೆಡಿಎಸ್ ರಾಜ್ಯಾಧ್ಯಕ್ಷ, ಶಾಸಕ ಎಚ್.ವಿಶ್ವನಾಥ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದು ಖಚಿತ : ಬಲ್ಲ ಮೂಲಗಳಿಂದ ಮಾಹಿತಿ

ಮೈಸೂರು,ಜೂ.3:- ಜೆಡಿಎಸ್ ರಾಜ್ಯಾಧ್ಯಕ್ಷ, ಶಾಸಕ ಎಚ್.ವಿಶ್ವನಾಥ್ ತಮ್ಮ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದು ಖಚಿತವಾಗಿದೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ಲಭಿಸಿದೆ.

ಇತ್ತೀಚೆಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ತಾವು ಸೂಚಿಸಿದ ಅಭ್ಯರ್ಥಿಗಳಿಗೆ ಪಕ್ಷದಿಂದ ಟಿಕೆಟ್ ನೀಡಲಿಲ್ಲ ಎಂದು ಅಸಮಾಧಾನಗೊಂಡಿದ್ದ ಅವರು, ಸಚಿವ ಸಾ.ರಾ.ಮಹೇಶ್ ವಿರುದ್ಧ ಬಹಿರಂಗ ಹೇಳಿಕೆಗಳನ್ನು ನೀಡಿದ್ದರು. ಜೆಡಿಎಸ್‍ನಲ್ಲಿ ತಮಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಹೇಳುವ ಮೂಲಕ ತಮ್ಮೆಲ್ಲ ಆಕ್ರೋಶವನ್ನು ಹೊರ ಹಾಕಿದ್ದರು. ಈ ಮೊದಲು ಅನಾರೋಗ್ಯ ಕಾರಣಕ್ಕಾಗಿ ವಿಶ್ವನಾಥ್ ಎರಡು ಬಾರಿ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ ಅದಕ್ಕೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಆದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವಕಾಶ ಕೊಟ್ಟಿರಲಿಲ್ಲ.

ಇದೀಗ ವಿಶ್ವನಾಥ್ ಅವರು ರಾಜೀನಾಮೆ ನೀಡಲು ಸಿದ್ಧರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: