ಮೈಸೂರು

ಮನೆಯಲ್ಲಿ ಯಾರೂ ಇಲ್ಲದ ವೇಳೆ ಯುವತಿ ನೇಣಿಗೆ ಶರಣು

ಮೈಸೂರು,ಜೂ.3:- ಖಾಸಗಿ ಬ್ಯಾಂಕಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯುವತಿಯೋರ್ವರು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಚಾಮುಂಡಿ ಬೆಟ್ಟದ ಪಾದದ ಬಳಿ ನಡೆದಿದೆ.

ಮೃತ ಯುವತಿಯನ್ನು ಚಾಮುಂಡಿ ಬೆಟ್ಟದ ಪಾದದ ಬಳಿ ಇರುವ ಅಯ್ಯಪ್ಪ ಸ್ವಾಮಿ ದೇಗುಲದ ಹಿಂಭಾಗದ ನಿವಾಸಿ ಮಹದೇವ ಎಂಬವರ ಪುತ್ರಿ ಗೀತಾ(23) ಎಂದು ಗುರುತಿಸಲಾಗಿದೆ. ಇವರು ಖಾಸಗಿ ಬ್ಯಾಂಕೊಂದರ ಕ್ರೆಡಿಟ್ ಕಾರ್ಡ್ ವಿಭಾಗದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನಿಗೆ ವೇಲ್ ನಿಂದ ನೇಣು ಹಾಕಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮಹದೇವ್ ಅವರು ಇತ್ತೀಚೆಗಷ್ಟೇ ಮನೆಯೊಂದನ್ನು ನಿರ್ಮಿಸಿ ಗೃಹಪ್ರವೇಶ ಮಾಡಿದ್ದರು ಎನ್ನಲಾಗಿದೆ.

ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: