ಮೈಸೂರು

ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರ ಕೈಚಳಕ : ಲಕ್ಷಾಂತರ ರೂ.ಮೌಲ್ಯದ ಚಿನ್ನಾಭರಣ ಕಳುವು

ಮೈಸೂರು,ಜೂ.3:-  ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಲಕ್ಷಾಂತರ ರೂ.ಬೆಲೆಬಾಳುವ ಚಿನ್ನಾಭರಣಗಳನ್ನು ದೋಚಿದ ಘಟನೆ ವಿದ್ಯಾನಗರದಲ್ಲಿ ನಡೆದಿದೆ.

ವಿದ್ಯಾನಗರದ ನಿವಾಸಿ ಕವಿತಾ ಎಂಬವರು ನಜರ್ ಬಾದ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಿಸಿದ್ದಾರೆ. ಅವರು ತಮ್ಮ ಪತಿ ಮತ್ತು ಮಕ್ಕಳೊಂದಿಗೆ ಊರಿಗೆ ಹೋಗಿದ್ದಾಗ ಅವರ ಮನೆಯ ಬಾಗಿಲು ಮುರಿದು 1.50ಲಕ್ಷರೂ.ಮೌಲ್ಯದ ಚಿನ್ನಾಭರಣವನ್ನು ಕಳ್ಳರು ಕಳುವು ಮಾಡಿದ್ದಾರೆ.

ಇವರು ಮೇ.14ರಂದು ಮನೆಗೆ ಬೀಗ ಹಾಕಿಕೊಂಡು ಊರಿಗೆ ಹೋಗಿದ್ದರು.ಮೇ.31ರಂದು ಮನೆಗೆ ಮರಳಿದಾಗ ಬಾಗಿಲು ಒಡೆದಿರುವುದು ಗಮನಕ್ಕೆ ಬಂದಿದೆ. ಮನೆಯೊಳಗೆ ಇರುವ ಬೀರುವಿನ ಬಾಗಿಲು ಮುರಿದಿರುವ ಕಳ್ಳರು ಚಿನ್ನಾಭರಣಗಳನ್ನು ಕಳುವು ಮಾಡಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ನಜರ್ ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

 

Leave a Reply

comments

Related Articles

error: