ಮೈಸೂರು

ಗೋ ರಕ್ಷಕ ಶಿವು ಉಪ್ಪಾರ್ ಹತ್ಯೆ ಖಂಡಿಸಿ ಪ್ರತಿಭಟನೆ

ಮೈಸೂರು,ಜೂ.3:- ಗೋ ರಕ್ಷಕ ಶಿವು ಉಪ್ಪಾರ್ ಹತ್ಯೆ ಖಂಡಿಸಿ ಗಂಧದ ಗುಡಿ ಫೌಂಡೇಶನ್ ವತಿಯಿಂದ ಪ್ರತಿಭಟನೆ ನಡೆಯಿತು.

ಜಿಲ್ಲಾಧಿಕಾರಿಗಳ ಕಛೇರಿ ಬಳಿಯಿಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ಬೆಳಗಾವಿ ಜಿಲ್ಲೆಯ ಬಾಗೇವಾಡಿ ಬಸ್ ನಿಲ್ದಾಣದಲ್ಲಿ ಗೋರಕ್ಷಕ ಶಿವು ಉಪ್ಪಾರ್ ಅವರನ್ನು ಕಿಡಿಗೇಡಿಗಳು ಹತ್ಯೆ ಮಾಡಿದ್ದಾರೆ. ಪ್ರಕರಣ ನಡೆದು  ಇಷ್ಟು ದಿನವಾದರೂ ಯಾವೊಬ್ಬ ಆರೋಪಿಯನ್ನೂ ಸರ್ಕಾರ ಬಂಧಿಸಿಲ್ಲ. ಸರ್ಕಾರ ಕೂಡಲೇ ಆರೋಪಿಗಳನ್ನು ಪತ್ತೆ ಹಚ್ಚಿ ಬಂದಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಮೃತ ಶಿವು ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು. ಗೋರಕ್ಷಕರಿಗೆ ರಕ್ಷಣೆ ಇಲ್ಲವಾಗಿದೆ. ಮುಮದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆಯ ಕ್ರಮಗಳನ್ನು ವಹಿಸಬೇಕೆಂದು ಒತ್ತಾಯಿಸಿದರು.

ರಾಜ್ಯಾಧ್ಯಕ್ಷ ಮೋಹನ್ ಕುಮಾರ್, ನಂದೀಶ್ ಸಂತೋಷ್, ಸಂದೀಪ್, ಸುರೇಶ್, ರವಿ ಸೇರಿದಂತೆ ಮೂವತ್ತಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: