ಪ್ರಮುಖ ಸುದ್ದಿ

ಶಿಕ್ಷಣದಲ್ಲಿ ಹಿಂದಿ ಭಾಷೆ ಹೇರುವಿಕೆಯ ಬಗ್ಗೆ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಲಾಗಿಲ್ಲ : ಸಚಿವ ಡಿ.ವಿ.ಸದಾನಂದಗೌಡ

ದೇಶ(ನವದೆಹಲಿ)ಜೂ.3:- ಶಿಕ್ಷಣದಲ್ಲಿ ಹಿಂದಿ ಭಾಷೆ ಹೇರುವಿಕೆಯ ಬಗ್ಗೆ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಲಾಗಿಲ್ಲ ಎಂದಿದ್ದಾರೆ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ.

ಹಿಂದಿ ಭಾಷೆ ಹೇರಿಕೆ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿರುವ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಡಿ.ವಿ.ಸದಾನಂದಗೌಡ ಕೇಂದ್ರ ಸರ್ಕಾರವನ್ನು ವಿರೋಧಿಸಲು ಹಿಂದಿ ಹೇರಿಕೆ ವಿಚಾರ ಚರ್ಚಿಸುವುದು ಸರಿಯಲ್ಲ. ಇದು ನ್ಯಾಯೋಚಿತವೆಂತಲೂ ನಾನು ಒಪ್ಪುವುದಿಲ್ಲ. ಇಲ್ಲಿಯವರೆಗೂ ಹಿಂದಿ ಹೇರಿಕೆಯ ಕುರಿತು ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ ಎಂದಿದ್ದಾರೆ. (ಎಸ್.ಎಚ್)

Leave a Reply

comments

Related Articles

error: