ಕರ್ನಾಟಕಪ್ರಮುಖ ಸುದ್ದಿ

ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ನೀತಿಗೆ ಭಾರೀ ಪ್ರತಿರೋಧವೇಕೆ?

ಬೆಂಗಳೂರು (ಜೂ.3): ರಾಜ್ಯದಲ್ಲಿ ಕಳೆದ ಎರಡು ವರ್ಷಗಳಿಂದ ತಣ್ಣಗಾಗಿದ್ದ ಹಿಂದಿ ಹೇರಿಕೆಯ ಪರ-ವಿರೋಧದ ಚರ್ಚೆ ಇದೀಗ ಮತ್ತೆ ಕಾವು ಪಡೆದುಕೊಂಡಿದೆ. ಇದಕ್ಕೆ ಕಾರಣ ಕೇಂದ್ರ ಸರ್ಕಾರ ಹೇರಲು ಮುಂದಾಗಿರುವ ತ್ರಿಭಾಷಾ ನೀತಿ. ಕೇಂದ್ರ ಸರ್ಕಾರದ ಈ ನೀತಿಯ ವಿರುದ್ಧ ಇದೀಗ ಕರ್ನಾಟಕ ಮಾತ್ರವಲ್ಲ ಇಡೀ ದಕ್ಷಿಣ ಭಾರತ ಸಿಡಿದೆದ್ದು ನಿಂತಿದ್ದು ರಾಜ್ಯ ನಾಯಕರು ಟೀಕಾಪ್ರಹಾರ ನಡೆಸಿದ್ದಾರೆ. ಪರಿಣಾಮ ಮುಂದಿನ ದಿನಗಳಲ್ಲಿ ಇದು ದೊಡ್ಡ ಹೋರಾಟವಾಗಿ ರೂಪಗೊಳ್ಳುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿದೆ.

ಕೇಂದ್ರ ಸರ್ಕಾರ ತ್ರಿಭಾಷಾ ನೀತಿಯನ್ನು ಕಡ್ಡಾಯಗೊಳಿಸುವ ತೀರ್ಮಾನ ಹೊರಬೀಳುತ್ತಿದ್ದಂತೆಯೇ ರಾಜ್ಯ ನಾಯಕರು ಇದನ್ನು ಸಾರಾಸಗಟಾಗಿ ಖಂಡಿಸಿದ್ದಾರೆ. ಭಾನುವಾರವೇ ಈ ಕುರಿತು ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ, “ನಿನ್ನೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಹೊರಡಿಸಿದ ಶಿಕ್ಷಣ ಕರಡು ಕಾರ್ಯನೀತಿಯಲ್ಲಿ ಹಿಂದಿ ಹೇರಿಕೆಯ ಬಗ್ಗೆ ನನ್ನ ಗಮನಕ್ಕೆ ಬಂದಿದೆ. 3-ಭಾಷಾ ಸೂತ್ರದ ಹೆಸರಿನಲ್ಲಿ ಒಂದು ಭಾಷೆಯನ್ನು ಇತರರ ಮೇಲೆ ಯಾವ ಕಾರಣಕ್ಕೂ ಹೇರಬಾರದು. ಇದರ ಬಗ್ಗೆ ಹೆಚ್ಚಿನ ಮಾಹಿತಿ ಪಡೆದು ರಾಜ್ಯ ಸರ್ಕಾರದ ನಿಲುವನ್ನು ಕೇಂದ್ರಕ್ಕೆ ತಿಳಿಸಲಾಗುವುದು” ಎಂದಿದ್ದರು. ಕುಮಾರಸ್ವಾಮಿ ಪ್ರತಿಕ್ರಿಯೆ ಹಿನ್ನೆಲೆಯಲ್ಲಿ ಇದೀಗ ಬಹುತೇಕ ರಾಜ್ಯದ ಎಲ್ಲಾ ನಾಯಕರು ಹಿಂದಿ ಹೇರಿಕೆಯ ವಿರುದ್ಧ ಕೂಗೆತ್ತಿದ್ದಾರೆ.

ಕೇಂದ್ರ ಸರ್ಕಾರದ ತ್ರಿಭಾಷಾ ನೀತಿಯ ವಿರುದ್ಧ ಟ್ವೀಟ್ ಮಾಡುವ ಮೂಲಕ ಗುಡುಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, “ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ಕನ್ನಡಿಗರ ಮೇಲೆ ಹಿಂದಿ ಹೇರಿಕೆಯನ್ನು ಸಹಿಸಲಾಗದು. ಕನ್ನಡ ನಮ್ಮ ಅಸ್ಮಿತೆ. ನೆಲ, ಜಲ ಹಾಗೂ ಭಾಷೆಯ ವಿಚಾರದಲ್ಲಿ ರಾಜಿಯಾಗುವ ಪ್ರಶ್ನಯೇ ಇಲ್ಲ. ರಾಜ್ಯದ ಜನಪ್ರತಿನಿಧಿಗಳೆಲ್ಲರೂ ಪಕ್ಷಾತೀತವಾಗಿ ಚಿಂತನೆ ಮಾಡಬೇಕೆಂದು ನನ್ನ ಮನವಿ” ಎಂದಿದ್ದಾರೆ.

Ours is a land that exhibits Unity in Diversity. Peaceful coexistence is the need to establish harmony &any force shall work against the laws of society.
For us Kannada is an identity, &learning any other language should be by Choice & not by imposition.#StopHindiImposition
1/3
Siddaramaiah (@siddaramaiah) June 3, 2019

ಮತ್ತೊಂದು ಟ್ವೀಟ್​ನಲ್ಲಿ, “ಶಿಕ್ಷಣದಲ್ಲಿ ಮಾತೃಭಾಷೆಯಲ್ಲದ ಭಾಷೆ ಐಚ್ಛಿಕವಾಗಿರಬೇಕೆ ಹೊರತು ಕಡ್ಡಾಯವಾಗಬಾರದು. ಇದು ಇನ್ನೊಂದು ಭಾಷೆಯ ಒತ್ತಾಯಪೂರ್ವಕ ಹೇರಿಕೆಯಂತಾಗಿದೆ. ಮಗುವಿನ ಕಲಿಕೆಯ ಶಕ್ತಿಯನ್ನು ಕುಂಠಿತಗೊಳಿಸುತ್ತದೆ. ಹಿಂದಿ ಭಾಷಿಗರಲ್ಲದವರ ಮೇಲೆ ಹಿಂದಿ ಹೇರಿಕೆ ಮಾಡಲು ಹೊರಟಿರುವುದು ಭಾರತ ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿದೆ ಎಂಬುದು ನನ್ನ ಭಾವನೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ವಿರುದ್ಧ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್​ ಸಹ ಅಸಮಾಧಾನ ವ್ಯಕ್ತಪಡಿಸಿದ್ದರು, “ಕೇಂದ್ರ ಸರ್ಕಾರದ ಈ ನೀತಿ ರಾಜ್ಯಗಳ ಸಂವೇದನೆ ಹಾಗೂ ಉತ್ತಮ ಹಿತಾಸಕ್ತಿಗಳನ್ನು ಪ್ರತಿಬಿಂಬಿಸುವಂತಿರಬೇಕು. ಆದರೆ, ಈ ಭಾಷಾ ನೀತಿ ನಮ್ಮ ಹಿತಾಸಕ್ತಿಗೆ ಅನುಗುಣವಾಗಿಲ್ಲ. ಹೀಗಾಗಿ ನಮ್ಮ ರಾಜ್ಯದ ಮೇಲಿನ ಯಾವುದೇ ಭಾಷಾ ಹೇರಿಕೆಯನ್ನು ನಾವು ವಿರೋಧಿಸುತ್ತೇವೆ” ಎಂದು ತಿಳಿಸಿದ್ದಾರೆ.

We shall go through & respond to the draft National Education Policy released by MHRD for feedback.
We are committed to demand that the policy reflect the sensibilities & best interests of our States. We shall oppose the imposition of any language! #StopHindiImposition
Dr. G Parameshwara (@DrParameshwara) June 2, 2019

ಒಟ್ಟಾರೆ ಕೇಂದ್ರದಲ್ಲಿ ಹೊಸ ಎರಡನೇ ಅವಧಿಗೆ ಬಿಜೆಪಿ ಸರ್ಕಾರ ಮತ್ತೆ ಅಧಿಕಾರ ಹಿಡಿದ ಕೇವಲ ಮೂರು ದಿನಗಳಲ್ಲಿ ದಕ್ಷಿಣ ಭಾರತದ ಮೇಲೆ ಹಿಂದಿ ಭಾಷೆ ಹೇರಿಕೆಗೆ ಮುಂದಾಗಿದೆ. ಈ ಹಿಂದೆಯೂ ಹಲವು ಬಾರಿ ಕೇಂದ್ರ ಸರ್ಕಾರ ಹಿಂದಿ ಹೇರಿಕೆಗೆ ಮುಂದಾದಾಗಲು ದಕ್ಷಿಣ ರಾಜ್ಯಗಳು ಅದರಲ್ಲೂ ಮುಖ್ಯವಾಗಿ ತಮಿಳುನಾಡು ಪ್ರಬಲವಾಗಿ ವಿರೋಧಿಸಿತ್ತು. ಇದೀಗ ಕರ್ನಾಟಕ, ಕೇರಳ ಹಾಗೂ ಆಂಧ್ರಪ್ರದೇಶ ಸಹ ಒಟ್ಟಾಗಿ ಕೇಂದ್ರದ ವಿರುದ್ಧ ಹಿಂದಿ ಹೇರಿಕೆ ವಿರೋಧದ ಹೋರಾಟಕ್ಕೆ ಧನಿಗೂಡಿಸಿರುವುದು ಮುಂದಿನ ದಿನಗಳಲ್ಲಿ ದೊಡ್ಡ ಚಳುವಳಿಯಾಗಿ ರೂಪಗೊಂಡರೂ ಅಚ್ಚರಿ ಇಲ್ಲ.

(ಎನ್.ಬಿ)

Leave a Reply

comments

Related Articles

error: