ಕರ್ನಾಟಕಪ್ರಮುಖ ಸುದ್ದಿ

ಪದವಿ, ಪಿಜಿ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ವಿತರಣೆಗೆ ಕ್ರಮ: ಸಚಿವ ಜಿಟಿಡಿ ನೇತೃತ್ವದಲ್ಲಿ ಸಭೆ

ಬೆಂಗಳೂರು (ಜೂ.4): ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಸಭಾಂಗಣದಲ್ಲಿ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳ ಕುಲಪತಿಗಳು ಹಾಗೂ ವಿಶ್ರಾಂತ ಕುಲಪತಿಗಳು ಸಭೆ ನಡೆಸಲಾಗಿದೆ.

ಸಭೆಯಲ್ಲಿ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಡಿಜಿಟಲ್ ಅಂಕಪಟ್ಟಿ ವಿತರಿಸಲು ತೀರ್ಮಾನಿಸಲಾಗಿದೆ. ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪ್ರಸಕ್ತ ಶೈಕ್ಷಣಿಕ ಸಾಲಿನ ಅಂತ್ಯದೊಳಗೆ ಡಿಜಿಟಲ್ ಅಂಕಪಟ್ಟಿ ವಿತರಿಸಲು ತೀರ್ಮಾನಿಸಲಾಗಿದೆ ಎಂದು ಸಚಿವ ಜಿ.ಟಿ. ದೇವೇಗೌಡ ಸಭೆಯ ಬಳಿಕ ಮಾಹಿತಿ ನೀಡಿದ್ದಾರೆ.

ವಿವಿಗಳ ಸಿಬ್ಬಂದಿಗೆ ವಿಟಿಯುನಿಂದ ಸೂಕ್ತ ತರಬೇತಿ ನೀಡಲಾಗುವುದು. ಜೊತೆಗೆ ಸಾಫ್ಟ್ ವೇರ್ ಖರೀದಿಗೆ ಕ್ರಮಕೈಗೊಳ್ಳುವಂತೆ ತಿಳಿಸಲಾಗಿದೆ. ಈ ಸಂಬಂಧ ಎಲ್ಲ ವಿವಿಗಳು ವಿಟಿಯು 5 ಲಕ್ಷ ರೂ. ಪಾವತಿಸಲು ನಿರ್ದೇಶಿಸಲಾಗಿದೆ ಎಂದು ಹೇಳಿದ್ದಾರೆ ಪ್ರಸಕ್ತ ಶೈಕ್ಷಣಿಕ ವರ್ಷದ ಅಂತ್ಯದೊಳಗೆ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಡಿಜಿಟಲ್ ಅಂಕಪಟ್ಟಿ ವಿತರಿಸಲಾಗುವುದು ಎಂದು ಹೇಳಿದ್ದಾರೆ. (ಎನ್.ಬಿ)

Leave a Reply

comments

Related Articles

error: