ಪ್ರಮುಖ ಸುದ್ದಿಮೈಸೂರು

ಸಿಎಂ ಕುಮಾರಸ್ವಾಮಿ ವಿರುದ್ಧ ಶಾಸಕ ಸುರೇಶ್ ಹೇಳಿಕೆ : ಅಭಿಮಾನಿಗಳಿಂದ ಖಂಡನೆ

ಮೈಸೂರು,ಜೂ.4 : ಸೋತು ಸುಣ್ಣವಾದವರು, ಕೈಲಾಗದೆ ಮೈಯೆಲ್ಲ ಪರಚಿಕೊಂಡರು ಎಂದು ಸಿಎಂ ಕುಮಾರಸ್ವಾಮಿ ವಿರುದ್ಧ ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಅವರು ನೀಡಿರುವ ಹೇಳಿಕೆಯನ್ನು ಅಖಿಲ ಕರ್ನಾಟಕ ಹೆಚ್.ಡಿ.ಕುಮಾರಸ್ವಾಮಿ ಅಭಿಮಾನಿಗಳ ಮಹಾ ಮಂಡಳಿಯು ತೀವ್ರವಾಗಿ ಖಂಡಿಸಿತು.

ಮಂಗಳವಾರ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಂಡಳಿಯ ಅಧ್ಯಕ್ಷ ಕಾಂತರಾಜ ಗೌಡರು ಮಾತನಾಡಿ, ಬಿಜೆಪಿಯ ಕೆಲ ನಾಯಕರು ಕುಮಾರಸ್ವಾಮಿಯವರ ಗ್ರಾಮ ವಾಸ್ತ್ರವ್ಯ ಬಗ್ಗೆ ವ್ಯಂಗ್ಯವಾಡಿದ್ದು ಖಂಡನೀಯ,  ಈ ಕೂಡಲೇ ಹೇಳಿಕೆಗಳನ್ನು ನಿಲ್ಲಿಸಬೇಕು, ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಉಪಾಧ್ಯಕ್ಷ ಶಿವಣ್ಣ, ಯುವ ಮುಖಂಡರಾದ ಟಿ.ಸುಪ್ರೀತ್, ವಿನಯ್ ಕುಮಾರ್ ಗೋಷ್ಠಿಯಲ್ಲಿ ಇದ್ದರು. (ವರದಿ : ಕೆ.ಎಂ.ಆರ್)

Leave a Reply

comments

Related Articles

error: