ಮೈಸೂರು

ಭಾರತೀಯ ವಿಜ್ಞಾನ ಅಕಾಡೆಮಿ ಫೆಲೊ ಪ್ರೊ.ಎನ್.ಬಿ.ರಾಮಚಂದ್ರಗೆ ಸನ್ಮಾನ

ಮೈಸೂರು ವಿಶ್ವವಿದ್ಯಾಲಯದ ತಳಿ ವಿಜ್ಞಾನ ಹಾಗೂ ವಂಶವಾಹಿ ಅಧ್ಯಯನ ಸಂಸ್ಥೆ ವತಿಯಿಂದ ಮೈಸೂರಿನ ರಾಣಿ ಬಹದ್ದೂರ್ ಸಭಾಂಗಣದಲ್ಲಿ 2017ರ ಭಾರತೀಯ ವಿಜ್ಞಾನ ಅಕಾಡೆಮಿಗೆ ಫೆಲೊ ಆಗಿ ನೇಮಕಗೊಂಡಿರುವ ಪ್ರೊ.ಎನ್.ಬಿ.ರಾಮಚಂದ್ರ ಅವರನ್ನು ಅಭಿನಂದಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಪ್ರೊ.ಎನ್.ಬಿ.ರಾಮಚಂದ್ರ ಅವರನ್ನು  ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಸನ್ಮಾನಿಸಿದರು. ಬಳಿಕ ಮಾತನಾಡಿದ ಅವರು ಮೈಸೂರು ವಿಶ್ವವಿದ್ಯಾಲಯದಲ್ಲಿ ವಿಜ್ಞಾನಿಗಳ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. ದಿನೇದಿನೇ ಸಂಶೋಧನೆಯ ಕ್ಷೇತ್ರದಲ್ಲಿ ಪ್ರಾಧ್ಯಾಪಕರು ಆಸಕ್ತಿ ಕಳೆದುಕೊಳ್ಳುತ್ತಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಕೆನಡಾದ ಮೆಕ್ ಮಾಸ್ಟರ್ ವಿವಿ ಜೀವವಿಜ್ಞಾನ ಪ್ರಾಧ್ಯಾಪಕ ಪ್ರೊ.ರಾಮಶಂಖರ್ ಸಿಂಗ್, ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಸಂದರ್ಶಕ ಪ್ರಾಧ್ಯಾಪಕ ಪ್ರೊ.ಎಚ್.ಎ.ರಂಗನಾಥ್, ಕುಲಸಚಿವ ಪ್ರೊ.ಆರ್.ರಾಜಣ್ಣ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: