ಮೈಸೂರು

ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ : ಸವಾರ ಸ್ಥಳದಲ್ಲೇ ಸಾವು

ಅಪರಿಚಿತ ವಾಹನ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಿಂಬದಿ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ ಘಟನೆ ಹುಣಸೂರಿನ ಕಟ್ಟೆಮಳಲವಾಡಿ ಗ್ರಾಮದ ಬಳಿ ನಡೆದಿದೆ.

ಮೃತನನ್ನು ರಾಮಶೆಟ್ಟಿ(55) ಎಂದು ಗುರುತಿಸಲಾಗಿದ್ದು, ಪಟ್ಟಲದಮ್ಮ ದೇವಸ್ಥಾನದ ಹತ್ತಿರ ಅಪರಿಚಿತ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಬೈಕ್ ನ ಹಿಂಬದಿ ಸವಾರ ವೆಂಕಟೇಶ ಕಾಲುಮುರಿತಕ್ಕೊಳಗಾಗಿದ್ದು, ಹುಣಸೂರು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

comments

Related Articles

error: