ಮೈಸೂರು

ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ : ಎಸಿಪಿ ಮೋಹನ್

ಮೈಸೂರು,ಜೂ.5 : ಜೆಎಸ್ಎಸ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆಯಲ್ಲಿ ದೇವರಾಜ ಸಂಚಾರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಜಿ.ಎನ್.ಮೋಹನ್ ಅವರು ಗಿಡ ನಡೆಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಪರಿಸರ ಸಂರಕ್ಷಣೆ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾನೂನುಗಳನ್ನು ತಂದರೂ ಸಹ ಅದರ ರಕ್ಷಣೆ ಪ್ರತಿಯೊಬ್ಬ ನಾಗರೀಕರ ಜವಾಬ್ದಾರಿಯಾಗಿದೆ, ಆದ್ದರಿಂದ ತಮ್ಮ ತಮ್ಮ ಮನೆ ಮತ್ತು ಜಮೀನುಗಳಲ್ಲಿ ಮಳೆನೀರು ಕೊಯ್ಲನ್ನು ಮಾಡಿ ನೀರನ್ನು ಸಂಕರ್ಷಿಸಿ ಅಂತರ್ಜಲ ಮಟ್ಟವನ್ನು ಹೆಚ್ಚಿಸಿಕೊಳ್ಳಬೇಕೆಂದು ಕರೆ ನೀಡಿದರು.

ಜೆಎಸ್ಎಸ್ ಆಸ್ಪತ್ರೆ ನಿರ್ದೇಶಕ ಡಾ.ಕರ್ನಲ್ ಎಂ.ದಯಾನಂದ ಅಧ್ಯಕ್ಷತೆ ವಹಿಸಿ ಮಾತನಾಡಿದರು, ಜೆಎಸ್ಎಸ್ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ.ಹೆಚ್.ಬಸವನಗೌಡ, ಮೈದ್ಯಕೀಯ ಅಧೀಕ್ಷಕ ಡಾ.ಎಂ.ಗುರುಸ್ವಾಮಿ, ಮುಖ್ಯ ಆಡಳಿತಾಧಿಕಾರಿ ಬಸವರಾಜ್ ಕುಪ್ಪಸದ್, ಮುಖ್ಯ ಅಭಿಯಂತರ ವಿಜಯ್ ಬೆನ್ನೂರು ಮತ್ತು ಸ್ಥಾನೀಯ ವೈದ್ಯಾಧಿಕಾರಿ ಡಾ.ಶಾಂತಮಲ್ಲಪ್ಪ ಹಾಗೂ ಆಸ್ಪತ್ರೆ ಸಿಬ್ಬಂದಿ ವರ್ಗದವರು ಹಾಜರಿದ್ದರು. (ಕೆ.ಎಂ.ಆರ್)

Leave a Reply

comments

Related Articles

error: