ಮೈಸೂರು

ಚಾಮುಂಡೇಶ್ವರಿ ಕ್ಷೇತ್ರದ ಮಾಜಿ ಶಾಸಕ ಎಂ.ಸತ್ಯನಾರಾಯಣ್ ನಿಧನ

ಮೈಸೂರು,ಜೂ.7:- ಚಾಮುಂಡೇಶ್ವರಿ ಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಎಂ.ಸತ್ಯನಾರಾಯಣ್ ಅನಾರೋಗ್ಯದಿಂದ ಗುಂಗ್ರಾಲ್ ಛತ್ರದಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಅವರಿಗೆ 74ವರ್ಷ ವಯಸ್ಸಾಗಿತ್ತು. ಇವರಿಗೆ ಪತ್ನಿ ನಿರ್ಮಲಾ, ಪುತ್ರರಾದ ಅರುಣ್ ಕುಮಾರ್, ಜಗದೀಶ್, ಪುತ್ರಿ ಎಸ್ ಸುನೀತಾ ಇದ್ದಾರೆ. ಇಂದು ಅವರ ಅಂತ್ಯಕ್ರಿಯೆ ಸ್ವಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸಚಿವ ಜಿ.ಟಿ.ದೇವೇಗೌಡ ಸಂತಾಪ

ನನ್ನ ಆತ್ಮೀಯರೂ ಮತ್ತು ಚಾಮುಂಡೇಶ್ವರಿ ಕ್ಷೇತ್ರದ ಮಾಜಿ  ಶಾಸಕರಾಗಿದ್ದ ಎಂ ಸತ್ಯನಾರಾಯಣ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ದುಃಖವಾಗಿದೆ‌. ನನ್ನ ಮತ್ತು ಅವರ ನಡುವಿನ ಸಂಬಂಧ ಸುದೀರ್ಘವಾದದ್ದು.‌ ನನ್ನ ಸೋದರ ಸಂಬಂಧಿಗಳಾಗಿದ್ದ ಇವರು ಮತ್ತು ನಾನು, ಸಹಕಾರ ಸಂಘಗಳ ಚುನಾವಣೆಯಿಂದಲೇ ರಾಜಕೀಯ ಪ್ರವೇಶಿಸಿದವರು. ಇವರ ಕುಟುಂಬಕ್ಕೆ ತಾಯಿ ಚಾಮುಂಡೇಶ್ವರಿ, ಶೋಕ ಭರಿಸುವ ಶಕ್ತಿ ನೀಡಲಿ ಎಂದು ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: