ಮೈಸೂರು

ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೂರು ದಿನಗಳ ಕಾಲ ಶಾಂತಿಯುತ ಪ್ರತಿಭಟನೆ

ಭಾರತ್ ಅರ್ತ್ ಮೂವರ್ಸ್ ಎಂಪ್ಲಾಯೀಸ್ ಅಸೋಸಿಯೇಶನ್ ಬೆಂಬಲದೊಂದಿಗೆ  ಬಿ.ಇ.ಎಂ.ಎಲ್  ಕಾರ್ಖಾನೆಯ ಮುಖ್ಯದ್ವಾರದ ಬಳಿ  ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕಾರ್ಮಿಕರು ಮೂರು ದಿನಗಳ ಶಾಂತಿಯುತ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದಾರೆ.

ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ಕೇಂದ್ರ ಸರ್ಕಾರದ ನೀತಿ ಆಯೋಗದ ತೀರ್ಮಾನದಂತೆ ಬಂಡವಾಳ ಹಿಂತೆಗೆತ ಮತ್ತು ಖಾಸಗೀಕರಣ ಮಾಡಲು ಕೇಂದ್ರ ಸರ್ಕಾರ ಹೊರಟಿರುವುದು ಕಾರ್ಮಿಕರಿಗೆ, ಅಧಿಕಾರಿಗಳಿಗೆ ಮತ್ತು ಗುತ್ತಿಗೆ ಕಾರ್ಮಿಕರಿಗೆ ತೀವ್ರ ಆಘಾತವನ್ನುಂಟು ಮಾಡಿದೆ. ಕೇಂದ್ರ ಸರ್ಕಾರ ಈ ನಿಲುವಿನಿಂದ ಹಿಂದೆ ಸರಿಯಬೇಕು ಎಂದು ಮೂರು ದಿನಗಳ ಕಾಲ ಶಾಂತಿಯುತ ಪ್ರತಿಭಟನೆ ನಡೆಸಲಿದ್ದೇವೆ ಎಂದರು.

ಪ್ರತಿಭಟನೆಯಲ್ಲಿ ನೂರಾರು ಕಾರ್ಮಿಕರು ಪಾಲ್ಗೊಂಡಿದ್ದರು.

Leave a Reply

comments

Related Articles

error: