ಪ್ರಮುಖ ಸುದ್ದಿ

ಇಂಡಿಯಾ- ಆಸ್ಟ್ರೇಲಿಯಾ ಪಂದ್ಯ ನೋಡಲು ಆಗಮಿಸಿದ ಮದ್ಯದ ದೊರೆ ವಿಜಯ್ ಮಲ್ಯ ಕ್ಯಾಮರಾ ಕಣ್ಣಿನಲ್ಲಿ ಸೆರೆ

ದೇಶ(ನವದೆಹಲಿ)ಜೂ.10:- ಮದ್ಯದ ದೊರೆ ವಿಜಯ್ ಮಲ್ಯ, ಲಂಡನ್‍ನ ಕೆನ್ನಿಂಗ್ಟನ್ ಓವಲ್‍ನಲ್ಲಿ   ನಡೆದ ಟೀಂ ಇಂಡಿಯಾ ಹಾಗೂ ಆಸ್ಟ್ರೇಲಿಯಾ ಪಂದ್ಯವನ್ನು ನೋಡಲು ಆಗಮಿಸಿದ ವೇಳೆ ಕ್ಯಾಮರಾ ಕಣ್ಣಿಗೆ ಬಿದ್ದಿದ್ದಾರೆ.

ಕ್ರೀಡಾಂಗಣದ ಗೇಟ್ ಬಳಿ ಮಲ್ಯ ಟಿಕೆಟ್ ನೀಡಿ ಒಳ ಹೋಗುತ್ತಿದ್ದ ವೇಳೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದರು. ಬಳಿಕ ನಾನು ಮ್ಯಾಚ್ ನೋಡಲು ಬಂದಿದ್ದೇನೆ ಎಂದು ಕ್ರೀಡಾಂಗಣದ ಒಳಗೆ ಹೋದರು.

ಐಸಿಸಿ 2019 ಏಕದಿನ ವಿಶ್ವಕಪ್‍ನಲ್ಲಿ ಟೀಂ ಇಂಡಿಯಾವು ತನ್ನ ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಎದುರಿಸಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿರುವ ಕೊಹ್ಲಿ ಪಡೆ ಗೆಲುವು ಸಾಧಿಸಿದೆ.

ಮದ್ಯದ ದೊರೆ ವಿಜಯ್ ಮಲ್ಯ ಬ್ಯಾಂಕ್‍ಗಳಿಂದ ಸಾವಿರಾರು ಕೋಟಿ ರೂ. ಸಾಲ ಪಡೆದು ಮರುಪಾವತಿ ಮಾಡದೇ ಲಂಡನ್‍ನಲ್ಲಿ ತಲೆ ಮರೆಸಿಕೊಂಡಿದ್ದಾರೆ. ಮಲ್ಯ ಗಡಿಪಾರಿಗೆ ಬ್ರಿಟನ್ ಆಂತರಿಕ ಸಂಸತ್ತು ಒಪ್ಪಿಗೆ ನೀಡಿದೆ. ಆದರೆ ಈ ಸಂಬಂಧ ವಿಚಾರಣೆ ಮುಂದೂಡಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: