ಮೈಸೂರು

ಬಿಜೆಪಿಗೆ ಐತಿಹಾಸಿಕ ಗೆಲುವು : ಜೂ.11-12ರಂದು ಕೃತಜ್ಞತಾ ಸಭೆ ; ಕೋಟೆ ಶಿವಣ್ಣ

ಮೈಸೂರು,ಜೂ.10:- ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಕರ್ನಾಟಕದಲ್ಲಿ ನಿರೀಕ್ಷೆಗೂ ಮೀರಿ ಅಭೂತಪೂರ್ವವಾದ ಜಯಭೇರಿ ಬಾರಿಸಿದೆ. ಅದರಲ್ಲೂ ಚಾಮರಾಜ ಲೋಕಸಭಾ ಕ್ಷೇತ್ರದಲ್ಲಿ ಶ್ರೀನಿವಾಸ್ ಪ್ರಸಾದ್ ಅವರು ಸ್ಪರ್ಧಿಸಿ ಬಿಜೆಪಿ ಐತಿಹಾಸಿಕ ಗೆಲುವನ್ನು ಸಾಧಿಸಿದೆ. ಆದ್ದರಿಂದ ಗೆಲುವಿಗೆ ಕಾರಣರಾದ ಕಾರ್ಯಕರ್ತರಿಗೆ ಮತ್ತು ಪದಾಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಲು ಕೃತಜ್ಞತೆ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮುಖಂಡ ಕೋಟೆ ಶಿವಣ್ಣ ತಿಳಿಸಿದರು.

ಪತ್ರಕರ್ತರ ಭವನದಲ್ಲಿಂದು ನಡೆದ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು  ಚಾಮರಾಜ ನಗರದಲ್ಲಿ ಜೂ.11 ರಂದು ನಂದಿಭವನದಲ್ಲಿ , ಜೂ. 12 ರಂದು ನಂಜನಗೂಡಿನಲ್ಲಿ ಕೃತಜ್ಞತೆ ಸಭೆಯನ್ನು ಏರ್ಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿಯೂ ದೊಡ್ಡ ಬಹಿರಂಗ ಸಭೆಯನ್ನು ಕೂಡ ಏರ್ಪಡಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾದವಯ್ಯ, ಬೋರೆಗೌಡ , ಕಮರಳ್ಳಿ ಸುಬ್ಬಣ್ಣ , ಬಾಲಕೃಷ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: