ಕರ್ನಾಟಕಪ್ರಮುಖ ಸುದ್ದಿ

ಶಾಸಕ ಎಂ.ಟಿ.ಬಿ.ನಾಗರಾಜ್ ಮನೆ ಮೇಲೆ ಐಟಿ ದಾಳಿ : ದಾಖಲೆ ವಶ

ಕಾಂಗ್ರೆಸ್ ಪಕ್ಷದ ಹೊಸಕೋಟೆ ಕ್ಷೇತ್ರದ ಶಾಸಕ ಎಂ.ಟಿ.ಬಿ. ನಾಗರಾಜ್ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಇಂದು ಬೆಳಿಗ್ಗೆ ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಗರುಡಾಚಾರ್ ಪಾಳ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತರಾಗಿರುವ ಶಾಸಕ ನಾಗರಾಜ್ ನಿವಾಸದ ಮೇಲೆ ಏಕಾಏಕಿ ದಾಳಿ ನಡೆಸಿ ದಾಳಿ ನಡೆಸಿರುವ ಅಧಿಕಾರಿಗಳು, ಹಲವಾರು ಮಹತ್ತರ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

ಕಳೆದ ಹಲವಾರು ತಿಂಗಳಿಂದ ಸಿಎಂ ಆಪ್ತರ ಮನೆಗಳ ಮೇಲೆ ನಿರಂತರ ದಾಳಿ ನಡೆಸುತ್ತಿರುವ ಅಧಿಕಾರಿಗಳು ಈಚೆಗಷ್ಟೇ ಸಚಿವ ರಮೇಶ್ ಜಾರಕಿಹೊಳಿ, ಕಾಂಗ್ರೆಸ್ ಪಕ್ಷದ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್, ಅಧಿಕಾರಿಗಳಾದ ಚಿಕ್ಕರಾಯಪ್ಪ ಹಾಗೂ ಜಯಚಂದ್ರ ಅವರ ನಿವಾಸಗಳ ಮೇಲೆ ದಾಳಿ ನಡೆಸಿ ಭಾರೀ ಪ್ರಮಾಣದ ನಗದು, ಆಸ್ತಿ ದಾಖಲೆಗಳು ಸೇರಿದಂತೆ ಷೇರು ವಹಿವಾಟಿಗೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಂಡಿರುವುದನ್ನು ಸ್ಮರಿಸಬಹುದು.

Leave a Reply

comments

Related Articles

error: