ಪ್ರಮುಖ ಸುದ್ದಿ

ಶ್ರೀ ಶಕ್ತಿ ವೃದ್ಧಾಶ್ರಮದ ಹಿರಿಯ ನಾಗರೀಕರಿಗೆ ಬಟ್ಟೆ ವಿತರಣೆ

ರಾಜ್ಯ(ಮಡಿಕೇರಿ) ಜೂ. 11 :- ಕರ್ನಾಟಕ ದಲಿತ ಸಂಘರ್ಷ ಸಮಿತಿ ಕೊಡಗು ಜಿಲ್ಲಾ ಘಟಕದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ರವರ 128ನೇ ಜನ್ಮದಿನಾಚರಣೆ ಹಾಗೂ ಬುದ್ಧ ಪೂರ್ಣಿಮೆಯ ಅಂಗವಾಗಿ ಮಡಿಕೇರಿಯ ಆಜಾದ್ ನಗರದಲ್ಲಿರುವ ಶ್ರೀ ಶಕ್ತಿ ವೃದ್ಧಾಶ್ರಮದ ಹಿರಿಯ ನಾಗರೀಕರಿಗೆ ಬಟ್ಟೆ ವಿತರಣೆ ಮಾಡಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಸ್ಪತ್ರೆಯ ಉಪವೈದ್ಯಾಧಿಕಾರಿ ಡಾ.ದೇವದಾಸ್ ಶ್ರೀಶಕ್ತಿ ವೃದ್ಧಾಶ್ರಮ ಹಿರಿಯ ನಾಗರೀಕರಿಗೆ ನೆಲೆ ದೊರಕಿಸಿಕೊಟ್ಟಿರುವುದು ಶ್ಲಾಘನೀಯ. ವೃದ್ಧಾಶ್ರಮದ ಹಿರಿಯರಿಗೆ ವಾರಕ್ಕೊಂದು ಬಾರಿ ವೈದ್ಯಕೀಯ ಚಿಕಿತ್ಸೆ ದೊರೆಯುವಂತಾಗಬೇಕು ಎಂದು ಅಭಿಪ್ರಾಯಪಟ್ಟರು.
ದಲಿತ ಸಂಘರ್ಷ ಸಮಿತಿ ಹಲವಾರು ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬರುತ್ತಿದ್ದು, ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿರುವುದು ಉತ್ತಮ ಬೆಳವಣಿಗೆ ಎಂದರು.
ದಲಿತ ಸಂಘರ್ಷ ಸಮಿತಿಯ ವಿಭಾಗೀಯ ಸಂಚಾಲಕ ಕೆ.ವೀರಭದ್ರಯ್ಯ ಮಾತನಾಡಿ, ಡಾ.ಅಂಬೇಡ್ಕರ್ ಜಯಂತಿಯ ಪ್ರಯುಕ್ತ 19 ವರ್ಷಗಳಿಂದ ಶ್ರೀ ಶಕ್ತಿ ವೃದ್ಧಾಶ್ರಮದ ತಂದೆತಾಯಿಯರಿಗೆ ಬಟ್ಟೆಗಳನ್ನು ವಿತರಿಸಿಕೊಂಡು ಬರುತ್ತಿದ್ದೇವೆ. ಮನೆಯಲ್ಲಿ ಆಶ್ರಯವಿಲ್ಲದಿದ್ದಾಗ ಅನಿವಾರ್ಯವಾಗಿ ಇಲ್ಲಿಗೆ ಬರಬೇಕಾಗುತ್ತದೆ. ಆದರೆ ಯಾರೂ ಧೈರ್ಯಗೆಡದೆ ನೆಮ್ಮದಿಯ ಜೀವನ ಸಾಗಿಸಿ ಎಂದು ಹಾರೈಸಿದರು.
ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ಪ್ರಾಸ್ತವಿಕವಾಗಿ ಮಾತನಾಡಿದರು.
ಇದೇ ಸಂದರ್ಭ ಸಮಿತಿ ವತಿಯಿಂದ ಡಾ.ದೇವದಾಸ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಅಲ್ಲದೆ 17 ಮಂದಿ ಹಿರಿಯ ನಾಗರಿಕರಿಗೆ ಬಟ್ಟೆ ವಿತರಣೆ ಮಾಡಲಾಯಿತು.
ಸಮಿತಿಯ ತಾಲೂಕು ಸಂಚಾಲಕ ದೀಪಕ್, ವೃದ್ದಾಶ್ರಮದ ಮುಖ್ಯಸ್ಥ ಸತೀಶ್, ಪ್ರಮುಖರಾದ ಖಲೀಲ್ ಹಾಜರಿದ್ದರು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: