ಪ್ರಮುಖ ಸುದ್ದಿಮೈಸೂರು

ಐಎಂಎ ವಿಚಾರದಲ್ಲಿ ನನ್ನನ್ನು ಸಿಲುಕಿಸಿದ್ದಾರೆ ರೋಶನ್ ಬೇಗ್ ಹೇಳಿಕೆ : ಎಸ್.ಐ ಟಿ ಮುಂದೆ ಹೋಗಿ ಹೇಳಪ್ಪ ಸಿದ್ದು ತಿರುಗೇಟು

ಮೈಸೂರು,ಜೂ.13:-  ನೋಡಿ ನಾವು ಎಂಥಾ ಪರಿಸ್ಥಿತಿಯಲ್ಲಿದ್ದೇವೆ. ಸತ್ಯ ಹೇಳಲಾಗದಂತಹ ಕಷ್ಟದ ಪರಿಸ್ಥಿತಿಯಲ್ಲಿದ್ದೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು  ಮೋದಿ ಮತ್ತು ಅಮಿತ್ ಷಾ ವಿಚಾರದಲ್ಲಿ ಸತ್ಯ ಹೇಳುವಂತಿಲ್ಲ. ಪುಲ್ವಾಮಾ ಘಟನೆ ಬಗ್ಗೆ ಪ್ರಶ್ನೆ ಕೇಳುವಂತಿಲ್ಲ. ನೋಡಿ ನಮ್ಮ ಪರಿಸ್ಥಿತಿ ಹೇಗಿದೆ ಅಂತ‌. ನರೇಂದ್ರ ಮೋದಿ ಒಬ್ಬನೇ ದೇಶಭಕ್ತ. ಅವನಿಂದಲೇ ದೇಶ ಉಳಿಯುವುದು ಎಂದು ಬಿಂಬಿಸಲಾಯಿತು. ಮಾಧ್ಯಮಗಳು ಸೇರಿದಂತೆ ಎಲ್ಲರೂ ಮೋದಿ ಮೋದಿ ಎಂದರು. ಆದ್ರೆ ಈಗ ನೋಡಿ ದೇಶದ ಜಿಡಿಪಿ ಎಷ್ಟು  ಕುಸಿದಿದೆ ಅಂತ. ಇದನ್ನು ಕೂಡ ನಾವು ಪ್ರಶ್ನೆ ಮಾಡಬಾರದಾ? ಸಂವಿಧಾನದಲ್ಲಿ ನಮಗೆ ಪ್ರಶ್ನೆ ಮಾಡುವ ಹಕ್ಕಿಲ್ಲವೇ. ಆರ್ಥಿಕ ಪರಿಸ್ಥಿತಿ ಸುಧಾರಣೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.

ಐಎಂಎ ವಿಚಾರದಲ್ಲಿ ನನ್ನನ್ನು ಸಿಲುಕಿಸಿದ್ದಾರೆ ಎಂಬ ರೋಷನ್ ಬೇಗ್ ಹೇಳಿಕೆಗೆ  ಅದನ್ನು ಮಾಧ್ಯಮದ ಮುಂದೆ ಹೇಳ್ತಿಯಾ? ಹೋಗಿ ಎಸ್‌ಐಟಿ ಮುಂದೆ ಹೇಳಪ್ಪ ರೋಷನ್ ಬೇಗ್‌ಗೆ ತಿರುಗೇಟು ನೀಡಿದರು. ಐಎಂಎ ವಿಚಾರದಲ್ಲಿ ಎಸ್.ಐ.ಟಿ ರಚನೆ ಆಗಿದೆ. ಎಸ್.ಐ.ಟಿ ಸಂಪೂರ್ಣವಾಗಿ ತನಿಖೆ ನಡೆಸಲಿದೆ. ಆ ಬಗ್ಗೆ ನಾನು ಸಾರ್ವಜನಿಕವಾಗಿ ಮಾತನಾಡಲ್ಲ‌ ಎಂದರು.

ಸಚಿವ ಸಂಪುಟ ವಿಸ್ತರಣೆ ವಿಚಾರ ಪ್ರತಿಕ್ರಿಯಿಸಲು ನಿರಾಕರಿಸಿದ ಸಿದ್ದು ಸಚಿವ ಸಂಪುಟ ವಿಸ್ತರಣೆ ಮಾಡಿಕೊಳ್ಳುತ್ತಾರೆ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಲೇ ಸ್ಥಳದಿಂದ ನಿರ್ಗಮಿಸಿದರು. (ಕೆ.ಎಸ್,ಎಸ್.ಎಚ್)

 

 

Leave a Reply

comments

Related Articles

error: