ಕರ್ನಾಟಕಪ್ರಮುಖ ಸುದ್ದಿಮನರಂಜನೆಮೈಸೂರು

ಸರ್ಕಾರ ಉತ್ತಮ ಚಿತ್ರಗಳಿಗೆ ನೀಡುವ ಹಣ ಏರಿಕೆ ಮಾಡಬೇಕು : ರಾಜ್ಯಪಾಲ ವಜುಬಾಯಿ ರುಢಬಾಯಿವಾಲಾ ಸಲಹೆ

ಪ್ರತಿಯೊಬ್ಬ ನಿರ್ದೇಶಕನಿಗೂ ಆಸ್ಕರ್ ಪ್ರಶಸ್ತಿಯನ್ನು ಪಡೆದುಕೊಳ್ಳಬೇಕು ಎಂಬ ಕನಸಿರುತ್ತದೆ ಅದಕ್ಕೆ ಸಹಕರಿಸುವ ನಿಟ್ಟಿನಲ್ಲಿ ಸರಕಾರ ಪ್ರಸ್ತುತ ಉತ್ತಮ ಪ್ರಶಸ್ತಿಗಳಿಗೆ ನೀಡುತ್ತಿರುವ 10 ಲಕ್ಷ ರೂ. ಬದಲಾಗಿ 50 ಲಕ್ಷಕ್ಕೆ ಏರಿಕೆ ಮಾಡಬೇಕು ಎಂದು ರಾಜ್ಯಪಾಲ ವಜುಬಾಯಿ ರುಢಾಬಾಯಿವಾಲಾ ಸಲಹೆ ನೀಡಿದರು.

ಮೈಸೂರಿನ ಅರಮನೆ ಮುಂಭಾಗದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಚಲನಚಿತ್ರ ಅಕಾಡೆಮಿ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸಹಯೋಗದಲ್ಲಿ ಆಯೋಜಿಸಲಾಗಿದ್ದ 9ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿಜೇತ ಸಿನಿಮಾಗಳಿಗೆ ಪ್ರಶಸ್ತಿಗಳನ್ನು ವಿತರಿಸಿದರು. ಬಳಿಕ ಮಾತನಾಡಿದ ಅವರು,  ನಾವು ಕೇವಲ ಎರಡೂವರೆ ತಾಸುಗಳಲ್ಲಿ ನೋಡಿ ಸಂತಸ ಪಡುವ ಚಿತ್ರ ನಿರ್ಮಾಣದ ಹಿಂದೆ ಸಾಕಷ್ಟು ಶ್ರಮ ಅಡಗಿರುತ್ತದೆ ಎಂದರು.  ಸಿನಿಮಾ ಕೇವಲ ಮನರಂಜನೆಗೆ ಮಾತ್ರವಲ್ಲ. ಅದರಲ್ಲಿ ಸಂಸ್ಕಾರವನ್ನು ಬೆಳೆಸುವ ಅಂಶಗಳಿರುತ್ತವೆ ಎಂದು ತಿಳಿಸಿದರು.

ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಮೈಸೂರು ಮಹಾಪೌರ ಎಂ.ಜೆ.ರವಿಕುಮಾರ್, ಶಾಸಕ ಎಂ.ಕೆ.ಸೋಮಶೇಖರ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸರಕಾರದ ಪ್ರಧಾನ ಕಾರ್ಯದರ್ಶಿ ಎಂ.ಲಕ್ಷ್ಮೀನಾರಾಯಣ, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಎಸ್.ವಿ.ರಾಜೇಂದ್ರ ಸಿಂಗ್ ಬಾಬು, ಮೈಸೂರು ಜಿಲ್ಲಾಧಿಕಾರಿ ಡಿ.ರಂದೀಪ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: