ಮೈಸೂರು

ಜಿಂದಾಲ್ ಕಂಪನಿಗೆ ಅಕ್ರಮವಾಗಿ 3667 ಎಕರೆ ಜಮೀನನ್ನು ನೀಡುತ್ತಿರುವ ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿ ಪ್ರತಿಭಟನೆ

ಮೈಸೂರು,ಜೂ.14:- ಮೈಸೂರು ನಗರ ಮತ್ತು ಗ್ರಾಮಾಂತರ ಬಿಜೆಪಿ ಯುವ ಮೋರ್ಚಾದ ವತಿಯಿಂದ ಜಿಂದಾಲ್ ಕಂಪನಿಗೆ ಅಕ್ರಮವಾಗಿ 3667 ಎಕರೆ ಜಮೀನನ್ನು ನೀಡುತ್ತಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು  ವಿರೋಧಿಸಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

ಇಂದು ಗಾಂಧಿವೃತ್ತ (ದೊಡ್ಡ ಗಡಿಯಾರದ ಹತ್ತಿರ)ದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಜಿಂದಾಲ್ ಕಂಪನಿಗೆ ಅಕ್ರಮವಾಗಿ ಭೂಮಿ ನೀಡುತ್ತಿರುವ ಕ್ರಮವನ್ನು ಖಂಡಿಸಿ ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಸರ್ಕಾರ ತನ್ನ ಕ್ರಮವನ್ನು ಹಿಂದಕ್ಕೆ ಪಡೆಯಬೇಕು ಎಂದರು.  ಜೆಡಿಎಸ್ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಕ್ರಮವಾಗಿ ಜಿಂದಾಲ್ ಕಂಪನಿಗೆ 3,667 ಎಕರೆ ಜಮೀನು ಪರಭಾರೆ ಮಾಡುತ್ತಿರುವುದು ವಿಷಾದನೀಯ. ಈಗಾಗಲೇ ಜಿಂದಾಲ್ ಕಂಪನಿಯ ವಶದಲ್ಲಿ 11,400ಎಕರೆ ಭೂಮಿಯಿದೆ. ಅದನ್ನೂ ಸಹ ಬಳಕೆ ಮಾಡಿಲ್ಲ. ಕನ್ನಡಿಗರಿಗೆ ನೀಡಿದ ಉದ್ಯೋಗವೆಷ್ಟು ಎಂಬುದರ ಕುರಿತು ಸ್ಪಷ್ಠೀಕರಣವಿಲ್ಲ. ಸರ್ಕಾರ ಕೂಡಲೇ ತನ್ನ ನಿರ್ಧಾರವನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ಬಿಜೆಪಿ ಯುವ ಮೋರ್ಚಾ ವತಿಯಿಂದ ರಾಜ್ಯಾದ್ಯಂತ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ನಗರ ಮತ್ತು ಗ್ರಾಮಾಂತರ ಬಿಜೆಪಿ ಯುವ ಮೋರ್ಚಾ ಪ್ರಮುಖರಾದ ಗೋಕುಲ್ ಗೋವರ್ಧನ್, ಸಂಪತ್, ಸೋಮಶೇಖರ್, ಜೈಶಂಕರ್, ನಾರಾಯಣ್, ಸು.ಮುರಳಿ, ರಾಜೇಶ್, ಸೋಮಶೇಖರ್ ರಾಜು, ಭರತ್, ದೇವರಾಜ್ ಮತ್ತಿತರರು ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: