ಪ್ರಮುಖ ಸುದ್ದಿ

ರಾಜ್ಯ ಸಮ್ಮಿಶ್ರ ಸರ್ಕಾರದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಪಕ್ಷೇತರ ಶಾಸಕರಾದ ಶಂಕರ್ ಮತ್ತು ಹೆಚ್. ನಾಗೇಶ್

ರಾಜ್ಯ(ಬೆಂಗಳೂರು)ಜೂ.14:- ರಾಜ್ಯ ಸಮ್ಮಿಶ್ರ ಸರ್ಕಾರದ ನೂತನ ಸಚಿವರಾಗಿ ಪಕ್ಷೇತರ ಶಾಸಕರಾದ ಶಂಕರ್ ಮತ್ತು ಹೆಚ್. ನಾಗೇಶ್ ಇಂದು ಪ್ರಮಾಣವಚನ ಸ್ವೀಕರಿಸಿದರು.

ರಾಜಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಣಿಬೆನ್ನೂರು ಶಾಸಕ ಆರ್. ಶಂಕರ್ ಮತ್ತು  ಕೋಲಾರದ ಮುಳುಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ಹೆಚ್. ನಾಗೇಶ್  ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ನೂತನ ಸಚಿವರಿಗೆ ರಾಜ್ಯಪಾಲ ವಜುಭಾಯಿ ವಾಲಾ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಡಿಸಿಎಂ  ಡಾ.ಜಿ. ಪರಮೇಶ್ವರ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: