ಮೈಸೂರು

ರಸ್ತೆ ಅಪಘಾತ : ಬೈಕ್ ಸವಾರ ಸಾವು

ರಸ್ತೆ ಅಪಘಾತದಲ್ಲಿ  ಬೈಕ್ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೃತನನ್ನು ನಂಜನಗೂಡು ಹೊಸಕೋಟೆ ಮಹದೇವನಾಯ್ಕ (40) ಎಂದು ಗುರುತಿಸಲಾಗಿದೆ.

ಮೈಸೂರಿನ ಟಿ.ನರಸಿಪುರ ರಸ್ತೆಯ ಪೊಲೀಸ್ ಲೇಔಟ್ ಬಳಿ ರಸ್ತೆಯಲ್ಲಿ ಅಡ್ಡಲಾಗಿ ಹಾಕಲಾಗಿದ್ದ ಬ್ಯಾರಿಕೇಡ್ ಗೆ ಡಿಕ್ಕಿಹೊಡೆದು ನೆಲಕ್ಕೆ ಬಿದ್ದ ಪರಿಣಾಮ ತಲೆಗೆ ತೀವ್ರಪೆಟ್ಟು ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಹೊಸಕೋಟೆಯಿಂದ ಮಾವನ ಮನೆ ಯಾಂದಳ್ಳಿ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಸಿದ್ದಾರ್ಥನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Leave a Reply

comments

Related Articles

error: