ಸುದ್ದಿ ಸಂಕ್ಷಿಪ್ತ

ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಕುರಿತು ಪೂರ್ವಬಾವಿ ಸಭೆ

ಹಾಸನ (ಜೂ.14): ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಜೂ 27 ರಂದು ಆಚರಿಸುವ ಸಂಬಂಧ ಪೂರ್ವಭಾವಿ ಚರ್ಚಿಸಲು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜೂ.15 ರಂದು ಸಂಜೆ 4 ಗಂಟೆಗೆ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆಯನ್ನು ಏರ್ಪಡಿಸಲಾಗಿದೆ.

ಸಂಬಂಧಪಟ್ಟ ಸಮಾಜದ ಮುಖಂಡರುಗಳು ಸಂಘ ಸಂಸ್ಥೆಯವರು ಸಭೆಗೆ ಆಗಮಿಸಿ ತಮ್ಮ ಸಲಹೆಗಳನ್ನು ನೀಡಿ ಸಭೆಯನ್ನು ಯಶಸ್ವಿಗೊಳಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: