ಸುದ್ದಿ ಸಂಕ್ಷಿಪ್ತ

ಜೂ.15ಕ್ಕೆ ವಿಶ್ವ ಪರಿಸರ ದಿನಾಚರಣೆ-ಸಂವಾದ

ಮೈಸೂರು,ಜೂ.14-ಶ್ರೀ ನಟರಾಜ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಜೂ.15 ರಂದು ಬೆಳಿಗ್ಗೆ 11 ಗಂಟೆಗೆ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಶ್ರೀ ಚಿದಾನಂದ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದು, ಪರಿಸರ ತಜ್ಞ ಪ್ರೊ.ಕೆ.ಸತ್ಯನಾರಾಯಣ ಸಂವಾದ ನಡೆಸಿಕೊಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಟರಾಜ ಪ್ರತಿಷ್ಠಾನದ ವಿಶೇಷಾಧಿಕಾರಿ ಪ್ರೊ.ಕೆ.ಸತ್ಯನಾರಾಯಣ, ಸಂಯೋಜನಧಿಕಾರಿ ಶಿವಕುಮಾರ್ ಉಪಸ್ಥಿತರಿರಲಿದ್ದಾರೆ. ಕಾಲೇಜು ಪ್ರಾಂಶುಪಾಲ ವಿ.ಪ್ರದೀಪ್ ಅಧ್ಯಕ್ಷತೆ ವಹಿಸಲಿದ್ದಾರೆ. (ಎಂ.ಎನ್)

Leave a Reply

comments

Related Articles

error: