ಸುದ್ದಿ ಸಂಕ್ಷಿಪ್ತ

ಅಸಂಘಟಿತ ಕಾರ್ಮಿಕರಿಗೆ ಬ್ಯಾಂಕ್ ಖಾತೆ ತೆರೆಯಲು ಅರ್ಜಿ

ಮೈಸೂರು,ಜೂ.15-ಕೇಂದ್ರ ಸರ್ಕಾರ ದಿನಗೂಲಿ ಕಾರ್ಮಿಕರಾದ ಎಲ್ಲ ಅಸಂಘಟಿತ ಕಾರ್ಮಿಕರಿಗೆ ಸರ್ಕಾರದ ಯೋಜನೆಗಳು ತಲುಪುವ ದೃಷ್ಟಿಯಿಂದ ಉಚಿತವಾಗಿ ಎಸ್ ಬಿಐ ಬ್ಯಾಂಕ್ ನಲ್ಲಿ ಖಾತೆ ತೆರೆಯಲು ಸೂಚನೆ ನೀಡಲಾಗಿದೆ.
ಹೀಗಾಗಿ ಅಸಂಘಟಿತ ಕಾರ್ಮಿಕರು ಕರ್ನಾಟಕ ರಾಜ್ಯ ಕಾರ್ಮಿಕರ ಹಾಗೂ ದಿನಗೂಲಿ ಕಾರ್ಮಿಕರ ಸಂಘದಲ್ಲಿ ಬೆಳಿಗ್ಗೆ 9.30 ರಿಂದ ಸಂಜೆ 5.30 ರವರೆಗೆ ಅರ್ಜಿಗಳು ದೊರೆಯುತ್ತಿದ್ದು, ಉಚಿತವಾಗಿ ಅರ್ಜಿಗಳನ್ನು ಪಡೆಯಬಹುದು. ಅರ್ಜಿ ಪಡೆಯಲು 3 ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ಆಧಾರ್ ಕಾರ್ಡ್, ವೋಟರ್ ಐಡಿ, ಡ್ರೈವಿಂಗ್ ಲೈಸೆನ್ಸ್, ಪಾನ್ ಕಾರ್ಡ್ ಇವುಗಳಲ್ಲಿ ಯಾವುದಾದರೂ 2 ಪ್ರತಿಗಳನ್ನು ತರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ. 0821-4191266 ಸಂಪರ್ಕಿಸಬಹುದು. (ಎಂ.ಎನ್)

Leave a Reply

comments

Related Articles

error: