ಮೈಸೂರು

ಭಾರತ ವಿಶ್ವಕಪ್ ಜಯಿಸಲಿ: ಕ್ರಿಕೆಟ್ ಅಭಿಮಾನಿಗಳಿಂದ ವಿಶೇಷ ಪೂಜೆ

ಮೈಸೂರು,ಜೂ.15-ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಗೆದ್ದು ಬರಲಿ ಎಂದು ನಗರದ ಕ್ರಿಕೆಟ್ ಪ್ರೇಮಿಗಳು ಜಲಪುರಿ ಪೊಲೀಸ್ ಕ್ವಾರ್ಟರ್ಸ್ ನಲ್ಲಿರುವ ಶ್ರೀ ಗಣಪತಿ ದೇವಸ್ಥಾನದಲ್ಲಿ ಟೀಂ ಇಂಡಿಯಾ ಆಟಗಾರರ ಹೆಸರಿನಲ್ಲಿ ಅರ್ಚನೆ, ವಿಶೇಷ ಪೂಜೆ ಸಲ್ಲಿಸಿದರು.

ಬಿಜೆಪಿ ಯುವ ಮುಖಂಡ ಲೋಹಿತ್ ಮಾತನಾಡಿ, ಟೀಂ ಇಂಡಿಯಾ ಇದುವರೆಗೂ ಆಡಿರುವ ಎರಡು ಪಂದ್ಯಗಳಲ್ಲೂ ಜಯಗಳಿಸಿದ್ದು, ಮುಂದಿನ ಪಂದ್ಯಗಳಲ್ಲೂ ಜಯಗಳಿಸಿ ಇತಿಹಾಸ ನಿರ್ಮಿಸಲಿ. ನಾಳೆ (ಭಾನುವಾರ) ನಡೆಯಲಿರುವ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲೂ ಟೀಂ ಇಂಡಿಯಾ ಉತ್ತಮ ಪ್ರದರ್ಶನ ನೀಡಿ ಗೆಲುವು ಸಾಧಿಸಲಿ ಎಂದು ಶುಭಹಾರೈಸಿದರು.

ಈ ಸಂದರ್ಭದಲ್ಲಿ ನವೀನ್ ಶೆಟ್ಟಿ, ಕಿರಣ್, ಬಸವರಾಜು, ಶಂಕರಣ್ಣ, ಬಸವರಾಜು, ಪ್ರವೀಣ್ ಶರ್ಮಾ, ಪ್ರವೀಣ್, ಪ್ರಕಾಶ್ ಇತರರು ಉಪಸ್ಥಿತರಿದ್ದರು. (ಕೆ.ಎಸ್, ಎಂ.ಎನ್)

 

Leave a Reply

comments

Related Articles

error: