ದೇಶ

ಮಹಿಳಾ ಹೋರಾಟಗಾರ್ತಿಗೆ ನಿಂದನೆ: ಮಲಯಾಳಂ ನಟ ವಿನಾಯಕನ್ ವಿರುದ್ಧ ದೂರು

ತಿರುವನಂತಪುರಂ,ಜೂ.15-ಮಹಿಳಾ ಹೋರಾಟಗಾರ್ತಿಯೊಬ್ಬರನ್ನು ನಿಂದಿಸಿದ ಆರೋಪದ ಮೇಲೆ ಮಲಯಾಳಂ ನಟ ವಿನಾಯಕನ್ ವಿರುದ್ಧ ಪ್ರಕರಣ ದಾಖಲಾಗಿದೆ.

ತಾನು ನಟನನ್ನು ಏಪ್ರಿಲ್ ತಿಂಗಳಲ್ಲಿ ಸಮಾರಂಭವೊಂದಕ್ಕೆ ಆಹ್ವಾನಿಸಿದ ವೇಳೆ ಆತ ಅಶ್ಲೀಲ ಹಾಗೂ ನಿಂದನಾತ್ಮಕ ಪದ ಪ್ರಯೋಗಿಸಿದ್ದಾರೆಂದು ಮಹಿಳೆ ತನ್ನ ದೂರಿನಲ್ಲಿ ಹೇಳಿದ್ದಾರೆ. ಕೊಟ್ಟಾಯಂ ಜಿಲ್ಲೆಯ ಪಂಬಾಡಿ ಎಂಬಲ್ಲಿನ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.

ಆಕೆ ಕುರಿತಂತೆ ಫೇಸ್ ಬುಕ್ ಪೋಸ್ಟ್ ಹಾಕಿದ್ದು, ನಟನ ವಿರುದ್ಧ ಐಪಿಸಿ ಸೆಕ್ಷನ್ 509, 294 ಹಾಗೂ ಕೇರಳ ಪೊಲೀಸ್ ಕಾಯಿದೆಯ ಸೆಕ್ಷನ್ 120() ಅನ್ವಯ ಪ್ರಕರಣ ದಾಖಲಿಸಲಾಗಿದೆ.

ಮಹಿಳೆ ಕೊಟ್ಟಾಯಂ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರೂ ಘಟನೆ ಕಲ್ಪೆಟ್ಟಾದಲ್ಲಿ ನಡೆದಿರುವುದರಿಂದ ಅಲ್ಲಿನ ಠಾಣೆಗೆ ಪ್ರಕರಣ ವರ್ಗಾಯಿಸಲಾಗಿದೆ. (ಎಂ.ಎನ್)

Leave a Reply

comments

Related Articles

error: