ಕರ್ನಾಟಕ

ಪ್ರವಾಸಿ ಟ್ಯಾಕ್ಸಿ: ಅರ್ಹ ಫಲಾನುಭವಿಗಳ ಪಟ್ಟಿ ಪ್ರಕಟ

ಹಾಸನ (ಜೂ.15): 2017-18 ಮತ್ತು 2018-19ನೇ ಸಾಲಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವರ್ಗದ ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಕಲ್ಪಿಸಲು ಪ್ರವಾಸಿಟ್ಯಾಕ್ಸಿ ಖರೀದಿಗೆ ಸಹಾಯಧನಕ್ಕೆ ಸ್ವೀಕೃತವಾದ ಅರ್ಜಿಗಳಲ್ಲಿ ಅರ್ಹ ಆಯ್ಕೆಯಾದ ಮತ್ತು ಕಾಯ್ದಿರಿಸಿದ ಅಭ್ಯರ್ಥಿಗಳ ಪಟ್ಟಿಯನ್ನು ಉಪ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಹಾಸನ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.

ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳು ಜುಲೈ 01 ರೊಳಗಾಗಿ ಈ ಕಚೇರಿಗೆ ಖುದ್ದಾಗಿ ಭೇಟಿ ನೀಡಿ ಅವಶ್ಯಕ ದಾಖಲಾತಿಗಳನ್ನು ಸಲ್ಲಿಸುವುದು. ತಪ್ಪದಲ್ಲಿ ಯಾವುದೇ ಪೂರ್ವ ಮಾಹಿತಿಯನ್ನು ನೀಡದೆ ಆಯ್ಕೆಯಾದ ಅಭ್ಯರ್ಥಿಗಳನ್ನು ಪಟ್ಟಿಯಿಂದ ಕೈಬಿಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಛೇರಿ, ಪ್ರವಾಸೋದ್ಯಮ ಇಲಾಖೆಯ ದೂರವಾಣಿ ಸಂಖ್ಯೆ:08172-268862 ಅನ್ನು ಸಂಪರ್ಕಿಸಲು ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರು (ಪ್ರಭಾರ) ಅವರು ತಿಳಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: