ಕರ್ನಾಟಕ

ಜೂನ್ 27ರಂದು ಕೆಂಪೇಗೌಡ ಜಯಂತಿ; ಅರ್ಥಪೂರ್ಣ ಆಚರಣೆಗೆ ಹಾಸನ ಜಿಲ್ಲಾಡಳಿತ ಸೂಚನೆ

ಹಾಸನ (ಜೂ.17): ಕೆಂಪೇಗೌಡ ಜಯಂತಿಗೆ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ದತೆಗೆ ಕ್ರಮಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳಾದ ಎಂ.ಎಲ್ ವೈಶಾಲಿ ಅವರು ಸೂಚನೆ ನೀಡಿದರು.

ಶನಿವಾರ, ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜೂನ್ 27 ರಂದು ನಡೆಯಲಿರುವ ನಾಡ ಪ್ರಭು ಕೆಂಪೇಗೌಡ ಜಯಂತಿಯ ಅಂಗವಾಗಿ ಪೂರ್ವಬಾವಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಕಾರ್ಯಕ್ರಮಕ್ಕೆ ಗಣ್ಯರು ಹಾಗೂ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು ಅಲ್ಲದೆ ಜೂನ್ 27 ರಂದು ಬೆಳಿಗ್ಗೆ 10 ಗಂಟೆಗೆ ವಿವಿಧ ಕಲಾ ತಂಡಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಮೆರವಣಿಗೆಯು ಪ್ರಾರಂಭಗೊಂಡು ನಗರದ ಪ್ರಮುಖ ಮಾರ್ಗಗಳ ಮೂಲಕ ಕಲಾ ಭವನ ತಲುಪಲಿದೆ. ಅಂದು ಬೆಳಿಗ್ಗೆ 11 ಗಂಟೆಗೆ ಕಲಾಭವನದಲ್ಲಿ ಸಭಾ ಕಾರ್ಯಕ್ರಮ ಜರುಗಲಿದೆ ಎಂದು ಅವರು ತಿಳಿಸಿದರು.

ವಿವಿಧ ಸಂಘಟನೆಗಳ ಪದಾಧಿಕಾರಿಗಳಿಂದ ಸಲಹೆ ಸೂಚನೆಗಳನ್ನು ಆಲಿಸಿದ ಅವರು ಕಾರ್ಯಕ್ರಮದ ಯಶಸ್ಸಿಗೆ ಎಲ್ಲರ ಸಹಕಾರ ಅಗತ್ಯ, ಪೌರಾಣಿಕ ನಾಟಕ, ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳುವಂತೆ ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶಿವಲಿಂಗಪ್ಪ ಎನ್ ಕುಂಬಾರ, ಜಿಲ್ಲಾ ವಕ್ಕಲಿಗರ ಸಂಘದ ಅಧ್ಯಕ್ಷರಾದ ಜಿ.ಎಲ್. ಮುದ್ದೇಗೌಡ, ಹಿರಿಯ ಸ್ವತಂತ್ರ ಹೋರಾಟಗಾರರಾದ ಶಿವಣ್ಣ, ಜಿಲ್ಲಾ ವಕ್ಕಲಿಗರ ಸಂಘದ ನಿರ್ದೇಶಕರಾದ ಬಿ.ಎನ್ ರಾಮಸ್ವಾಮಿ, ಜೈ ಕರ್ನಾಟಕ ಕಲಾ ಸಂಘದ ಕಲಾವಿದರಾದ ಜಿ.ಎಂ ಪ್ರದೀಪ್ ಮತ್ತಿತರರು ಸಭೆಯಲ್ಲಿ ಹಾಜರಿದ್ದರು. (ಎನ್.ಬಿ)

Leave a Reply

comments

Related Articles

error: