ಮೈಸೂರು

ಬಹಿರ್ದೆಸೆಗೆ ತೆರಳಿದ್ದ ವಿಧವೆ ಮೇಲೆ ಯುವಕನಿಂದ ಅತ್ಯಾಚಾರಕ್ಕೆ ಯತ್ನ : ಮೈಸೂರಿನಲ್ಲೊಂದು ಅಮಾನವೀಯ ಕೃತ್ಯ

ಮೈಸೂರು.ಜೂ.18:- ಬಹಿರ್ದೆಸೆಗೆ ತೆರಳಿದ್ದ ವಿಧವೆ  ಮೇಲೆ ಯುವಕನೋರ್ವ ಅತ್ಯಾಚಾರಕ್ಕೆ ಯತ್ನಿಸಿದ ಅಮಾನವೀಯ ಘಟನೆ ಮೈಸೂರು ತಾಲೂಕಿನ ಎಡಹಳ್ಳಿ ಗ್ರಾಮದಲ್ಲಿ ನಡೆದಿದೆ.

ಎಡಹಳ್ಳಿ ಗ್ರಾಮದ ನಿವಾಸಿ ನಿಂಗಮ್ಮ ಎಂಬ ವಿಧವೆ ಮೇಲೆ ಅದೇ ಗ್ರಾಮದ ಯೋಗಾನಂದ ಎಂಬ ಯುವಕನೋರ್ವ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.  ನಿನ್ನೆ ಬೆಳಗಿನ ಜಾವ ಅತ್ಯಾಚಾರಕ್ಕೆ ಯತ್ನಿಸಿದ್ದು,  ಮಹಿಳೆಯ ಮೇಲಿದ್ದ ಬಟ್ಟೆಯನ್ನು ಕಿತ್ತುಹಾಕಿದ್ದಾನೆ ಎನ್ನಲಾಗಿದೆ. ನಂತರ ಈ ವಿಚಾರವನ್ನು ಯಾರಿಗಾದರೂ ಹೇಳಿದರೆ, ಕೊಲೆ ಮಾಡುವುದಾಗಿ ಯುವಕ ಬೆದರಿಕೆ ಹಾಕಿದ್ದ. ಘಟನೆ ನಡೆದ ಬಳಿಕ ಯೋಗಾನಂದ ತಂದೆ ಶಿವಪಾದಸ್ವಾಮಿಗೆ ಮಹಿಳೆ ನಿಂಗಮ್ಮ ವಿಷಯ ತಿಳಿಸಿದ್ದಾರೆ. ತಂದೆಯೂ ಕೂಡ ಮಹಿಳೆಯನ್ನು ಅವಾಚ್ಯ ಪದಗಳಿಂದ ನಿಂದಿಸಿ ಗ್ರಾಮದಿಂದ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಗ್ರಾಮದಲ್ಲಿ ನ್ಯಾಯ ದೊರಕದ ಹಿನ್ನಲೆಯಲ್ಲಿ ಮಹಿಳೆ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ನಿಂಗಮ್ಮ ನ ದೂರಿನ ಮೇರೆಗೆ ಸ್ಥಳ ಪರಿಶೀಲನೆ ನಡೆಸಿ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ. ಯೋಗಾನಂದ ಸೇರಿದಂತೆ ಆತನ ತಂದೆ ಶಿವಪಾದಸ್ವಾಮಿ, ಮತ್ತೋರ್ವ ಆತನ ಸಂಬಂಧಿಕ ನಂಜುಂಡಸ್ವಾಮಿ ಮೇಲೆ ಎಫ್ ಐ ಆರ್ ದಾಖಲಾಗಿದೆ. ಪೊಲೀಸರು ಮೂರು ಮಂದಿ ಮೇಲೆ ಎಫ್ ಐ ಆರ್ ದಾಖಲಿಸಿ ತನಿಖೆ ಚುರುಕುಗೊಳಿಸಿದ್ದು, ಆರೋಪಿಗಳ ಬಂಧನಕ್ಕೆ ಮುಂದಾಗಿದ್ದಾರೆ.

ಜಯಪಿರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

 

 

Leave a Reply

comments

Related Articles

error: