ಮೈಸೂರು

ಪ್ರಶಾಂತಗೌಡ ಮೇಲೆ ಹಲ್ಲೆ ಯತ್ನ ನಡೆಸಿದವರ ಬಂಧನಕ್ಕೆ ಒತ್ತಾಯ

ಮೈಸೂರು ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ಮೈಸೂರು ಮಹಾನಗರಪಾಲಿಕೆ ಸದಸ್ಯ ಪ್ರಶಾಂತಗೌಡ ಮೇಲಿನ ಹಲ್ಲೆ ಯತ್ನವನ್ನು ಖಂಡಿಸಿದ್ದು, ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಮೈಸೂರಿನ ಜಲದರ್ಶಿನಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವೇದಿಕೆಯ ರಾಜಕುಮಾರ್ ಮಾತನಾಡಿ, ಸಮಾಜ ಸೇವೆಯಲ್ಲಿ ತೊಡಗಿರುವವರ ಮೇಲೆ ಹಲ್ಲೆ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರಲ್ಲದೇ ಅವರಿಗೆ ಸೂಕ್ತ ರಕ್ಷಣೆಯನ್ನು ನೀಡಬೇಕೆಂದು ಒತ್ತಾಯಿಸಿದರು. ಹಲ್ಲೆ ಯತ್ನ ನಡೆಸಿದವರನ್ನು ಕೂಡಲೇ ಬಂಧಿಸದಿದ್ದಲ್ಲಿ, ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವ ಎಚ್ಚರಿಕೆಯನ್ನೂ ನೀಡಿದರು.

ಸುದ್ದಿಗೋಷ್ಠಿಯಲ್ಲಿ ವೇದಿಕೆಯ ಸದಸ್ಯರಾದ ರವಿ, ಚಂದ್ರು, ಚರಣ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: