ಮೈಸೂರು

ಫೆ : 17-19 : ಕನ್ನಡ ಸಾಹಿತ್ಯ ಸಮ್ಮೇಳನ

ಮೈಸೂರು ಜಿಲ್ಲಾ 15ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಫೆ.17ರಿಂದ 19ರವರೆಗೆ ಎಡತೊರೆ ಅರ್ಕೇಶ್ವರ ಸ್ವಾಮಿ ದೇವಾಲಯದ ನಾಲ್ವಡಿ ಕೃಷ್ಣರಾಜ ಒಡೆಯರ್ ಮಹಾಮಂಟಪದಲ್ಲಿ ಆಯೋಜಿಸಲಾಗಿದ್ದು, ಡಾ.ಕೆ.ಅನಂತರಾಮು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ಸಮ್ಮೇಳನಾಧ್ಯಕ್ಷ ಡಾ.ಕೆ.ಅನಂತರಾಮು ಅವರನ್ನು ಶಾಲು ಹೊದೆಸಿ, ಹಾರ ಹಾಕಿ, ಫಲದೊಂದಿಗೆ ಆಮಂತ್ರಣ ನೀಡಿ ಆಹ್ವಾನಿಸಲಾಯಿತು.

ಈ ಸಂದರ್ಭ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವೈ.ಡಿ.ರಾಜಣ್ಣ, ಮಾಜಿ ಕಸಾಪ ಅಧ್ಯಕ್ಷ ಚಂದ್ರು,  ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: