ಮೈಸೂರು

ಹೊರಗುತ್ತಿಗೆ ನೌಕರರನ್ನು ಸೇವೆಯಲ್ಲಿ ಮುಂದುವರಿಸುವಂತೆ ಒತ್ತಾಯಿಸಿ ಪ್ರತಿಭಟನೆ

ಮೈಸೂರು,ಜೂ.20-ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಡಿ ಗ್ರೂಪ್ ಹೊರಗುತ್ತಿಗೆ ನೌಕರರನ್ನು ಕೆಲಸದಿಂದ ತೆಗೆದುಹಾಕದೆ ಸೇವೆಯಲ್ಲಿ ಮುಂದುವರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ವಸತಿನಿಲಯ ಕಾರ್ಮಿಕರ ಸಂಘದವರು ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಡೆಸುತ್ತಿರುವ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಸತಿನಿಲಯಗಳಲ್ಲಿ ಕೆಲಸ ಮಾಡುತ್ತಿರುವ 3,312 ಹೊರಗುತ್ತಿಗೆ ನೌಕರರನ್ನು ಸೇವೆಯಲ್ಲಿ ಮುಂದುವರಿಸುವಂತೆ ಮುಖ್ಯಮಂತ್ರಿಗಳು ಭರವಸೆ ನೀಡಿದ್ದರೂ. ಆದರೆ ಮೈಸೂರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಗುತ್ತಿಗೆ ನೌಕರರನ್ನು ಕೆಲಸದಿಂದ ತೆಗೆದುಹಾಕಿರುವುದನ್ನು ಪ್ರತಿಭಟನಕಾರರು ಖಂಡಿಸಿದರು.

ಮುಖ್ಯಮಂತ್ರಿಗಳು ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಸರ್ಕಾರದ ನಿರ್ದೇಶನ ಬರುವವರೆಗೂ ಹಾಸ್ಟೆಲ್ ಕಾರ್ಮಿಕರನ್ನು ಕೆಲಸದಲ್ಲಿ ಮುಂದುವರೆಸಬೇಕು. ಇಲಾಖೆಯಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಹಾಲಿ ಹೊರಗುತ್ತಿಗೆ ಹಾಸ್ಟೆಲ್ ನೌಕರರನ್ನು ಮೇಲೆ ತಿಳಿಸಿರುವ ಪ್ರಕರಣಗಳು ಇತ್ಯರ್ಥವಾಗುವವರೆಗೂ ಕೆಲಸದಿಂದ ತೆಗೆಯಬಾರದು. ನೌಕರರು ಕಾರ್ಯನಿರ್ವಹಿಸಿದ ಅವಧಿಗೆ ಇಎಸ್ಐ ಮತ್ತು ಇಪಿಎಫ್ ಹಣವನ್ನು ಪಾವತಿಸಿದ ದಾಖಲಾತಿಗಳನ್ನು ನೀಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ವಿ.ಯಶೋಧ, ಮುದ್ದುಕೃಷ್ಣ, ಚಂದ್ರಶೇಖರ್ ಮೇಟಿ, ಶಿವಣ್ಣ, ಸ್ವಾಮಿ, ಮಹದೇವ, ಬೀರೇಗೌಡ, ಶ್ರೀನಿವಾಸ, ಗೀತಾ ಇತರರು ಭಾಗವಹಿಸಿದ್ದರು. (ಎಚ್.ಎನ್, ಎಂ.ಎನ್)

Leave a Reply

comments

Related Articles

error: