
ಪ್ರಮುಖ ಸುದ್ದಿಮೈಸೂರು
ಜೂ.22ರಂದು ಜಯಚಾಮರಾಜೇಂದ್ರ ಒಡೆಯರ್ ಜನ್ಮ ಶತಾಬ್ದಿ : ಉಪನ್ಯಾಸ
ಮೈಸೂರು,ಜೂ.20 : ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಜಯಚಾಮರಾಜೇಂದ್ರ ಒಡೆಯರ್ ಜನ್ಮ ಶತಾಬ್ದಿಯನ್ನು ಜೂ.22ರಂದು ಬೆಳಗ್ಗೆ 11 ಗಂಟೆಗೆ ಜಗನ್ಮೋಹನ ಅರಮನೆಯಲ್ಲಿ ಏರ್ಪಡಿಸಲಾಗಿದೆ ಎಂದು ಪರಿಷತ್ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ ತಿಳಿಸಿದರು.
ಗುರುವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನಿಧ್ಯ, ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಉದ್ಘಾಟಿಸುವರು, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಮನು ಬಳಿಗಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಎಸ್.ಎ.ರಾಮದಾಸ್, ಮಹಾಪೌರೆ ಪುಷ್ಪಲತಾ ಜಗನ್ನಾಥ್ ಹಾಜರಿರಲಿದ್ದು ಹಿರಿಯ ವಿದ್ವಾಂಸ ಡಾ.ಎನ್.ಎಸ್.ತಾರಾನಾಥ್ ಅವರು ಜಯಚಾಮರಾಜೇಂದ್ರ ಒಡೆಯರ್ ಕುರಿತು ವಿಶೇಷ ಉಪನ್ಯಾಸ ನೀಡುವರು ಎಂದು ತಿಳಿಸಿದರು.
‘ಜಯಚಾಮರಾಜ ಒಡೆಯರ್ ಬದುಕು’ ಬಗ್ಗೆ ಆರ್ ರಾಜಚಂದ್ರ, ಆಡಳಿತ ಮತ್ತು ಸಾಮಾಜಿಕ ನ್ಯಾಯ ವಿಷಯವಾಗಿ ಪ್ರೊ.ಎನ್.ಚಿನ್ನಸ್ವಾಮಿ ಸೋಸಲೆ ಹಾಗೂ ಶಾಸ್ತ್ರೀಯ ಸಂಗೀತಕ್ಕೆ ನೀಡಿದ ಕೊಡುಗೆ ಬಗ್ಗೆ ಸಂಗೀತ ವಿದ್ವಾನ್ ಡಾ.ಸಿ.ಎ. ಶ್ರೀಧರ ಅವರುಗಳು ಉಪನ್ಯಾಸ ನೀಡುವರು. ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆ ವಿಶ್ರಾಂತ ನಿರ್ದೇಶಕ ಬಿ.ಎಸ್.ಶ್ರೀಧರರಾಜ್ ಅರಸು ಅಧ್ಯಕ್ಷತೆಯಲ್ಲಿ ಮಧ್ಯಾಹ್ನ 2.30 ಗಂಟೆಗೆ ಕಾರ್ಯಕ್ರಮ ನಡೆಯಲಿದೆ.
ಸಂಜೆ 4.30ಕ್ಕೆ ವಾರ್ತಾ ಮತ್ತು ಪ್ರಸಾರ ಇಲಾಖೆಯಿಂದ ಜಯಚಾಮರಾಜೇಂದ್ರ ಒಡೆಯರ್ ಕುರಿತಾದ ಸಾಕ್ಷ್ಯ ಚಿತ್ರ ಹಾಗೂ ಆರ್.ಎಸ್.ನಂದಕುಮಾರ್ ಮತ್ತು ತಂಡದವರಿಂದ ಕೃತಿಗಳ ಗಾಯನ ಇರುವುದು, ಅಂದು ಬೆಳಗ್ಗೆ 10.30ಕ್ಕೆ ಡಾ.ಮನು ಬಳಿಗಾರರಿಂದ ಜಯಚಾಮರಾಜೇಂದ್ರ, ನಾಲ್ವಡಿ ಕೃಷ್ಣರಾಜ ಹಾಗೂ ಚಾಮರಾಜ ಒಡೆಯರುಗಳ ಪ್ರತಿಮೆಗೆ ಮಾಲಾರ್ಪಣೆ ಎಂದು ತಿಳಿಸಿದರು.
ನಿಕಟ ಪೂರ್ವ ಅಧ್ಯಕ್ಷ ಎಂ.ಚಂದ್ರಶೇಖರ್, ಕೋಷಾಧ್ಯಕ್ಷ ರಾಜಶೇಖರ ಕದಂಬ ಗೋಷ್ಠಿಯಲ್ಲಿ ಇದ್ದರು. (ವರದಿ : ಕೆ.ಎಂ.ಆರ್)