ಮೈಸೂರು

ಪೊಲೀಸ್ ಇಲಾಖೆಯಲ್ಲಿ ಔರಾದ್ಕರ್ ವರದಿ ಜಾರಿಗೆ ತರುವಂತೆ ಪಡುವಾರಹಳ್ಳಿ ರಾಮಕೃಷ್ಣ ಮನವಿ

ಮೈಸೂರು,ಜೂ.21:- ರಾಜ್ಯ ಪೊಲೀಸ್ ಇಲಾಖೆಯಲ್ಲಿ ಔರಾದ್ಕರ್ ವರದಿ ಜಾರಿಗೆ ತರುವಂತೆ ಮೈಸೂರು ನಾಯಕರ ಪಡೆ ಮುಖ್ಯಮಂತ್ರಿಗಳಿಗೆ ಮನವಿ ನೀಡಿದೆ.

ಮೈಸೂರು ನಾಯಕರ ಪಡೆ ಅಧ್ಯಕ್ಷ ಪಡುವಾರಹಳ್ಳಿ ರಾಮಕೃಷ್ಣ ಜಿಲ್ಲಾಧಿಕಾರಿಗಳ ಕಛೇರಿಯ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ನೀಡಿದ್ದು, ಮನವಿಯಲ್ಲಿ ರಾಜ್ಯದಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿಗಳು, ಅಧಿಕಾರಿಗಳು ಜನರ ಸೇವೆಯೇ ಜನಾರ್ದನ ಸೇವೆ ಎಂದು ತಿಳಿದು ಹಗಲಿರುಳು ಎನ್ನದೆ ಯಾವುದೇ ಅಡ್ಡಿ ಕಷ್ಟ ಕಾರ್ಪಣ್ಯಗಳು ಬಂದರೂ ಎದೆಗುಂದದೆ ಜನರಿಗೆ ನ್ಯಾಯ ಒದಗಿಸಿ ಕೊಡುವ ನಿಟ್ಟಿನಲ್ಲಿ ಪೊಲೀಸರ ಪಾತ್ರ ಮಹತ್ತರವಾದದ್ದು. ಕರ್ನಾಟಕ ರಾಜ್ಯದ ಪೊಲೀಸರಿಗೂ ದೇಶದ ಇನ್ನಿತರೆ ರಾಜ್ಯಗಳ ಪೊಲೀಸರಿಗೂ ವೇತನ ಮತ್ತು ರಜೆ ಸೌಲಭ್ಯಗಳಲ್ಲಿ ಅಜಗಜಾಂತರ ವ್ಯತ್ಯಾಸವಿರುತ್ತದೆ. ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ತರವಾದ ನಿರ್ಧಾರವನ್ನು ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಔರಾದ್ಕರ್ ಅವರ ವರದಿಯನ್ನು ಜಾರಿಗೆ ತರುವ ಮೂಲಕ ಪೊಲೀಸ್ ಸಿಬ್ಬಂದಿಗಳಿಗೆ ಹಾಗೂ ಅವರ ಕುಟುಂಬಿಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ತನ್ನದೇ ಆದಂತಹ ಕಾರ್ಯವನ್ನು ಮಾಡುತ್ತಿರುವ ಪೊಲೀಸ್ ಇಲಾಖೆ ಸಿಬ್ಬಂದಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಔರಾದ್ಕರ್ ವರದಿಯನ್ನು ಜಾರಿಗೊಳಿಸುವ ಮೂಲಕ ಪೊಲೀಸ್ ವ್ಯವಸ್ಥೆಯನ್ನು ಸದೃಢಗೊಳಿಸುವ ಮೂಲಕ ಅವರ ಸೇವೆ  ಮತ್ತಷ್ಟು ಕರ್ನಾಟಕ ರಾಜ್ಯಕ್ಕೆ ಪ್ರಾಮಾಣಿಕವಾಗಿ ದೊರಕುವಂತಾಗಲಿ ಎಂದು ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: