ಕರ್ನಾಟಕಮೈಸೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕಮಾಂಡ್ ನ್ನು ತೃಪ್ತಿಪಡಿಸುವುದರಲ್ಲೇ ಮಗ್ನರಾಗಿದ್ದಾರೆ : ಸಚಿವ ಸದಾನಂದಗೌಡ ಲೇವಡಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ಒಂದೂವರೆ ವರ್ಷದಿಂದ ಹೈಕಮಾಂಡ್ ನ್ನು ತೃಪ್ತಿಪಡಿಸುವುದರಲ್ಲೇ ನಿರತರಾಗಿದ್ದಾರೆ. ಪರಿಣಾಮ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ. ಸಿದ್ದರಾಮಯ್ಯ ಹೈಕಮಾಂಡ್ ಗೆ ಆಗಾಗ್ಗೆ ಕಿಕ್ ಬ್ಯಾಕ್ ನೀಡದೇ ಹೋಗಿದ್ದರೆ ಎಂದೋ ಜಾಗ ಖಾಲಿ ಮಾಡಬೇಕಾಗುತ್ತಿತ್ತು  ಕೇಂದ್ರ ಸಚಿವ ಡಿ.ವಿ ಸದಾನಂದಗೌಡ  ಲೇವಡಿಯಾಡಿದ್ದಾರೆ.

ಮೈಸೂರಿನ ಜೆ.ಕೆ.ಮೈದಾನದಲ್ಲಿ ಡಿಜಿಧನ್ ಮೇಳದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು ಮಾಧ್ಯಮದೊಂದಿಗೆ ಮಾತನಾಡಿದರು. ಸಿದ್ದರಾಮಯ್ಯ ತಮ್ಮ ಕುರ್ಚಿ ಉಳಿಸಿಕೊಳ್ಳುವ ಸಲುವಾಗಿ ಹೈಕಮಾಂಡನ್ನು ಒಲಿಸಿಕೊಳ್ಳಲು ಹೆಚ್ಚಿನ ಸಮಯ ವ್ಯರ್ಥ ಮಾಡುತ್ತಿದ್ದಾರೆ.
ಇದೇ ಸಮಯವನ್ನು ರಾಜ್ಯದ ಆಡಳಿತದತ್ತ ಗಮನ ಹರಿಸಿದ್ದರೆ ರಾಜ್ಯ ಇಷ್ಟೊಂದು ಹಿಂದುಳಿಯುತ್ತಿರಲಿಲ್ಲ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಮಾಡಿರುವ ಆರೋಪದಲ್ಲಿ ಸತ್ಯಾಂಶವಿರಬಹುದು ಎಂಬ ಯಡಿಯೂರಪ್ಪ ಹೇಳಿಕೆಯನ್ನು  ಸದಾನಂದಗೌಡ ಸಮರ್ಥಿಸಿಕೊಂಡರು.
ಎಸ್.ಎಂ ಕೃಷ್ಣ,  ಅಂಬರೀಶ್ ಬಿಜೆಪಿ ಸೇರ್ಪಡೆ ಕುರಿತು ಸ್ಪಷ್ಟ ಉತ್ತರ ನೀಡಲು ನಿರಾಕರಿಸಿದ ಅವರು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ, ಆಡಳಿತ ಒಪ್ಪಿಕೊಂಡು ಪಕ್ಷಕ್ಕೆ ಬರುವವರಿಗೆ ಸ್ವಾಗತ. ಬೇರೆಯವರು ಬಂದ ಮಾತ್ರಕ್ಕೆ ಬಿಜೆಪಿ ಗೆ ಶಕ್ತಿ ಬರುತ್ತದೆ ಎನ್ನುವುದರಲ್ಲಿ ನನಗೆ ನಂಬಿಕೆಯಿಲ್ಲ. ಬೇರೆ ಪಕ್ಷದ ನಾಯಕರು ಬಿಜೆಪಿ ಗೆ ಸೇರ್ಪಡೆಯಾದರೆ ಸಣ್ಣ ಪ್ರಮಾಣದಲ್ಲಿ ಶಕ್ತಿ ಬರಬಹುದಷ್ಟೇ.  ಬಿಜೆಪಿ ಸಂಘಟನೆ ಆಧಾರದ ಮೇಲೆ ಬೆಳೆಯುತ್ತಿರುವ ಪಕ್ಷವಾಗಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರ ಬಹುಮುಖ ಬೆಲೆಯ ನೋಟುಗಳ ಚಲಾವಣೆಯನ್ನು ದಿಢೀರ್ ರದ್ದುಗೊಳಿಸಿದ ನಂತರ ದೇಶಾದ್ಯಂತ ಭ್ರಷ್ಟಾಚಾರಕ್ಕೆ, ಕಪ್ಪು ಹಣಕ್ಕೆಕಡಿವಾಣ ಬಿದ್ದಿದೆ.
ಜಮ್ಮು ಕಾಶ್ಮೀರ ಸೇರಿದಂತೆ ದೇಶದ ಇತರೆಡೆಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳು, ನಕ್ಸಲರ ಚಟುವಟಿಕೆಗಳಿಗೂ ಕಡಿವಾಣ ಹಾಕಿದಂತಾಗಿದೆ. ಜನತೆ ಕ್ಯಾಶ್ ಲೆಸ್ ವ್ಯವಸ್ಥೆಯತ್ತ ಹೆಚ್ಚಿನ ಒಲವು ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದರು. ಈ ಸಂದರ್ಭ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಬಿಜೆಪಿಯ ಹಲವು ಮುಖಂಡರು ಸಚಿವರ ಜೊತೆಗಿದ್ದರು.

Leave a Reply

comments

Related Articles

error: