ಮೈಸೂರು

ರಫ್ತು ನಿರ್ವಹಣಾ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

ಮೈಸೂರು,ಜೂ.24:- ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರ ಬೆಂಗಳೂರು ಮತ್ತು ಮೈಸೂರು ಶಾಖೆ ಜಿಲ್ಲಾ ಕೈಗಾರಿಕಾ ಕೇಂದ್ರ ಮೈಸೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಕೈಗಾರಿಕೋದ್ಯಮಿಗಳು ಮತ್ತು ವಾಣಿಜ್ಯೋದ್ಯಮಿಗಳು ಹಾಗೂ ಭಾವಿ ರಫ್ತುದಾರರಿಗಾಗಿ ಇಂದಿನಿಂದ 6ದಿನಗಳ ಕಾಲ ಅಂದರೆ ಜೂ.29ರವರೆಗೆ ರಫ್ತು ನಿರ್ವಹಣಾ ತರಬೇತಿ ಕಾರ್ಯಕ್ರಮವನ್ನು ಸಯ್ಯಾಜಿರಾವ್ ರಸ್ತೆಯಲ್ಲಿರುವ ವಿಟಿಪಿಸಿ ಮೈಸೂರು ಶಾಖೆ ಸಿಟಿಐ ಕಟ್ಟಡದಲ್ಲಿ ಹಮ್ಮಿಕೊಳ್ಳಲಾಗಿದೆ.

ಇಂದು ವಿಟಿಪಿಸಿ ಜಂಟಿ ನಿರ್ದೇಶಕ ಪ್ರವೀಣ್ ಈ ರಾಮ್ ದುರ್ಗ್ ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಮೈಸೂರು ಕೈಗಾರಿಕೆಗಳ ಸಂಘದ ಕಾರ್ಯದರ್ಶಿ ಸುರೇಶ್ ಕುಮಾರ್ ಜೈನ್, ಹೆಬ್ಬಾಳು ವಸಾಹತು  ಕೈಗಾರಿಕೋದ್ಯಮಿಗಳ ತಯಾರಕರ ಸಂಘದ ಅಧ್ಯಕ್ಷ  ಎನ್.ಹೆಚ್.ಜಯಂತ್, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಡಿ.ಕೆ.ಲಿಂಗರಾಜು, ಜಿ.ಪಂ.ಗ್ರಾಮೀಣ ಕೈಗಾರಿಕಾ ವಿಭಾಗದ ಉಪನಿರ್ದೇಶಕ ರಮೇಶ್ ಮೂರ್ತಿ, ಉಪನಿರ್ದೇಶಕ ಚೌಡಯ್ಯ, ವಿಟಿಪಿಸಿ ಮೈಸೂರು ಶಾಖೆಯ ಸಹಾಯಕ ನಿರ್ದೇಶಕಿ ಎಸ್.ಜಿ.ಸರಸ್ವತಿ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: