ಸುದ್ದಿ ಸಂಕ್ಷಿಪ್ತ

ಜುಲೈ1ರಂದು ವೈದ್ಯರ ದಿನಾಚರಣೆ: ಪ್ರಶಸ್ತಿ ಪ್ರದಾನ ಸಮಾರಂಭ

ಮೈಸೂರು,ಜೂ.24 : ಅನ್ವೇಷನಾ ಸೇವಾ ಟ್ರಸ್ಟ್ ವತಿಯಿಂದ ವೈದ್ಯರ ದಿನಾಚರಣೆ ಹಾಗೂ ಕ್ಷೇತ್ರದ ಗಣ್ಯರ ಸನ್ಮಾನವನ್ನು ಜುಲೈ 1ರ ಬೆಳಗ್ಗೆ 10 ಗಂಟೆಗೆ ದಿ ಇನ್ಸ್ ಟಿಟ್ಯೂಷನ್ ಆಫ್ ಇಂಜಿನಿಯರ್ಸ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಸಿಎಫ್ಟಿ.ಆರ್ಐ ನಿರ್ದೇಶಕ ಡಾ.ಕೆ.ಎಸ್.ಎಂ.ಎಸ್. ರಾಘವರಾವ್ ಉದ್ಘಾಟಿಸುವರು, ಆರೋಗ್ಯ ಮತ್ತು ಕುಟುಂಬ ಇಲಾಖೆ ವಿಶ್ರಾಂತ ನಿರ್ದೇಶಕ ಡಾ.ಡಿ.ತಿಮ್ಮಯ್ಯ ಅಧ್ಯಕ್ಷತೆ ವಹಿಸುವರು, ಮೈವಿವಿ ಕುಲಪತಿ ಪ್ರೊ.ಹೇಮಂತ್ ಕುಮಾರ್ ವೈದ್ಯ ವಿಭೂಷಣ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: