ಮೈಸೂರು

ಕ್ಷುಲ್ಲಕ ಕಾರಣ ವ್ಯಕ್ತಿ ಮೇಲೆ ಹಲ್ಲೆ : ವ್ಯಕ್ತಿ ಸಾವು

ಕ್ಷುಲಕ ವಿಚಾರಕ್ಕೆ ಸಂಬಂಧಿಸಿದಂತೆ ಪಕ್ಕದ ಮನೆಯವರಿಂದ ವ್ಯಕ್ತಿಯೋರ್ವನ ಮೇಲೆ ಹಲ್ಲೆ ನಡೆದಿದ್ದು, ಹಲ್ಲೆಗೊಳಗಾದ ವ್ಯಕ್ತಿ ಮರಣವನ್ನಪ್ಪಿದ ಘಟನೆ ನಡೆದಿದೆ.

ಮೃತನನ್ನು ಗಾಂಧೀನಗರ ನಿವಾಸಿ ಮಣಿ (27) ಎಂದು ಗುರುತಿಸಲಾಗಿದೆ. ಮಣಿ ಮೇಲೆ  ಆತನ ಪಕ್ಕದ ಮನೆಯ ಶ್ರೀನಿವಾಸ್ ಮತ್ತು ಆತನ ಕಡೆಯವರು ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಮಣಿ ಚಿಕಿತ್ಸೆಗಾಗಿ ಕೆ.ಆರ್.ಆಸ್ಪತ್ರೆಗೆ ದಾಖಲಾಗಿದ್ದ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆತ ಸಾವನ್ನಪ್ಪಿದ್ದಾನೆ.
ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

comments

Related Articles

error: