ಪ್ರಮುಖ ಸುದ್ದಿ

ಜೂನ್ 29 : ಮಂಡ್ಯದ ಪ್ರಧಾನಮಂತ್ರಿ ಕೌಶಲ್ಯ ಕೇಂದ್ರದಲ್ಲಿ ಉದ್ಯೋಗ ಮೇಳ

ರಾಜ್ಯ(ಮಂಡ್ಯ) ಜೂ.27:-  ಪ್ರಧಾನ ಮಂತ್ರಿ ಕೌಶಲ್ಯ ಕೇಂದ್ರದ ವತಿಯಿಂದ ಜೂನ್ 29 ರಂದು ಬೆಳಿಗ್ಗೆ 10 ಗಂಟೆಗೆ ಆರ್.ಎ.ಪಿ.ಸಿ.ಎಂ.ಎಸ್ ಕಟ್ಟಡದಲ್ಲಿರುವ ಪ್ರಧಾನಮಂತ್ರಿ ಕೌಶಲ್ಯ ಕೇಂದ್ರದಲ್ಲಿ ಉದ್ಯೋಗಮೇಳವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಮಂಡ್ಯ ಲೋಕಸಭಾ ಸದಸ್ಯರಾದ ಸುಮಲತ ಅಂಬರೀಶ್ ಅವರು ನಡೆಸಿಕೊಡಲಿದ್ದು, ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ.ಶ್ರೀನಿವಾಸ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಉದ್ಯೋಗಮೇಳದಲ್ಲಿ 15ಕ್ಕೂ ಹೆಚ್ಚಿನ ಉದ್ಯೋಗದಾತ ಸಂಸ್ಥೆಗಳು ಭಾಗವಹಿಸುತ್ತಿದ್ದು, ಜಿಲ್ಲೆಯ ನಿರುದ್ಯೋಗಿ ಯುವಕ ಯುವತಿಯರು ಇದರ ಸದುಪಯೋಗ ಪಡೆದುಕೊಳ್ಳಬಹುದು. ಉದ್ಯೋಗ ಮೇಳದಲ್ಲಿ ಭಾಗವಹಿಸಲಿಚ್ಛಿಸುವ ಅಭ್ಯರ್ಥಿಗಳು ಜೂನ್ 29 ರಂದು ಬೆಳಿಗ್ಗೆ 9 ಗಂಟೆಗೆ ನೊಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ 8660221962, 7019577742, 9535718831 ನ್ನು ಸಂಪರ್ಕಿಸಬಹುದು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: